ಏ.27ರಂದು ಸಿಎಂಗಳ ಜತೆ ಪ್ರಧಾನಿ ಮೋದಿ ವೀಡಿಯೊ ಕಾನ್ಫರೆನ್ಸ್
ಮೈಸೂರು

ಏ.27ರಂದು ಸಿಎಂಗಳ ಜತೆ ಪ್ರಧಾನಿ ಮೋದಿ ವೀಡಿಯೊ ಕಾನ್ಫರೆನ್ಸ್

April 23, 2020

ನವದೆಹಲಿ,ಏ.22- ಪ್ರಧಾನಿ ನರೇಂದ್ರ ಮೋದಿ ಏ.27ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೊನಾ ವೈರಸ್ ಸೋಂಕು ನಿಯಂತ್ರಣ ಮತ್ತು ಸೋಂಕು ಹರಡುವಿಕೆ ತಡೆಯುವ ಸಲುವಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಪರಿಣಾಮಗಳ ಬಗ್ಗೆ ಮುಖ್ಯ ಮಂತ್ರಿಗಳ ಜತೆ ಪ್ರಧಾನಿ ಪರಾಮರ್ಶೆ ನಡೆ ಸಲಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿ ಈಗಾಗಲೇ 2 ಬಾರಿ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ದ್ದಾರೆ. ಮಾ.24ರಂದು ಮೊದಲ ಬಾರಿ ಲಾಕ್‍ಡೌನ್ ನಿರ್ಧಾರ ಪ್ರಕಟಿಸುವ ಮುನ್ನ, ಮಾ.20ರಂದು ಮುಖ್ಯಮಂತ್ರಿಗಳ ಜತೆ ಮೋದಿ ಸಭೆ ನಡೆಸಿದ್ದರು. 21 ದಿನಗಳ ಲಾಕ್‍ಡೌನ್ ಮುಕ್ತಾಯವಾಗುವುದಕ್ಕೂ ಮುನ್ನ ನಡೆಸಿದ್ದ ಮತ್ತೊಂದು ಸಭೆಯಲ್ಲಿ, ಲಾಕ್‍ಡೌನ್ ನಿರ್ಧಾರಕ್ಕೆ ಬೆಂಬಲ ಸೂಚಿಸಿ ದ್ದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಮ ರ್ಪಿಸಿದ್ದರು. ಹಾಗೂ ಒಗ್ಗಟ್ಟಿನಿಂದ ಕೊರೊನಾ ವಿರುದ್ಧ ಹೋರಾಡೋಣ ಎಂದು ಕರೆ ನೀಡಿ ದ್ದರು. ಸೋಂಕಿನ ಹರಡುವಿಕೆ ಕಡಿಮೆ ಯಾಗದ ಹಿನ್ನೆಲೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್‍ಡೌನ್ ವಿಸ್ತರಣೆಗೆ ಮನವಿ ಮಾಡಿದ್ದರು. ಬಳಿಕ ಲಾಕ್‍ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸುವ ಬಗ್ಗೆ ಮೋದಿ ನಿರ್ಧಾರ ಕೈಗೊಂಡಿದ್ದರು. ಈ ಮಧ್ಯೆ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದಾದ್ಯಂತ ಕಳೆದ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,486 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 49 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

Translate »