ಜೂ.18ಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಶತಾಯುಷಿ
ಮೈಸೂರು

ಜೂ.18ಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಶತಾಯುಷಿ

June 16, 2022

ಅಹಮದಾಬಾದ್: ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಜೂನ್ ೧೮ರಂದು ೧೦೦ನೇ ವರ್ಷಕ್ಕೆ ಕಾಲಿಡಲಿ ದ್ದಾರೆ. ಅಂದು ಗುಜರಾತ್‌ಗೆ ಭೇಟಿ ನೀಡಲಿರುವ ಮೋದಿ ಅವರು, ಹೀರಾಬೆನ್ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಲಿದ್ದಾರೆ. ಬಳಿಕ ವಡೋದರಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹೀರಾ ಬೆನ್ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ, ವಡನಗರದಲ್ಲಿ ಧಾರ್ಮಿಕ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

 

Translate »