ಏ.8ರಂದು ಸಿಎಂಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ: ಕೊರೊನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆ
News

ಏ.8ರಂದು ಸಿಎಂಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ: ಕೊರೊನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆ

April 6, 2021

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಸೋಮವಾರ ಮೂಲಗಳು ತಿಳಿಸಿವೆ.

ಏ.8ರಂದು ಸಂಜೆ 6.30ಕ್ಕೆ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಕಳೆದ ಮಾ.17ರಂದು ಸಿಎಂಗಳೊಂದಿಗೆ ಕೊನೆಯ ಸಂವಾದ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ದೇಶದ ಕೆಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಎರಡನೇ ಅಲೆ ನಿಯಂತ್ರಿಸಲು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದ್ದರು. ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವ ಮುನ್ನ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮಂಗಳವಾರ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

Translate »