ರಾಜ್ಯದಲ್ಲಿ ಪೊಲೀಸ್ ಇಲಾಖೆ  ಕೇಸರೀಕರಣ ಮಾಡಲು ಅವಕಾಶ ನೀಡಲ್ಲ
News

ರಾಜ್ಯದಲ್ಲಿ ಪೊಲೀಸ್ ಇಲಾಖೆ ಕೇಸರೀಕರಣ ಮಾಡಲು ಅವಕಾಶ ನೀಡಲ್ಲ

May 24, 2023

ಬೆಂಗಳೂರು, ಮೇ 23(ಕೆಎಂಶಿ)-ರಾಜ್ಯದಲ್ಲಿ ಪೆÇಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ ನೀವು? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಪೆÇಲೀಸ್ ಅಧಿಕಾರಿ ಗಳನ್ನು ತರಾಟೆ ತೆಗೆದುಕೊಂಡರು ಉನ್ನತ ಮಟ್ಟದ ಪೆÇಲೀಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರು, ವಿಜಯ ಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿ ದ್ದೀರಾ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರ್ಕಾರದಲ್ಲಿ ಪೆÇಲೀಸ್ ಇಲಾಖೆಯನ್ನು ಕೇಸರಿ ಕರಣ ಮಾಡಲು ನಾವು ಬಿಡೊಲ್ಲ ಎಂದರು. ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಒಬ್ಬ ಎಡಿಜಿಪಿ ಓಎಂಆರ್ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ನೋಡಿ. ಪ್ರಕರಣ ಬಯಲಿಗೆ ತಂದವರಿಗೆ ಕಿರುಕುಳ ನೀಡಿದ್ದೀರಾ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಕಾಟ ಕೊಟ್ಟಿದ್ದೀರಾ. ಇಡೀ ದೇಶದಲ್ಲಿ ಕರ್ನಾಟಕ ಪೆÇಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನು ಹಾಳು ಮಾಡಿದ್ದೀರಾ ನೀವು. ಎಲ್ಲಿ ನೋಡಿದರೂ ಬರೀ ಕಾಸು, ಕಾಸು, ಕಾಸು ಎಂದು ತರಾಟೆಗೆ ತೆಗೆದುಕೊಂಡರು.

ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರ್ಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೆÇಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರ್ಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡೋದು ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು. ನಿಮ್ಮ ಹಿಂದಿನ ವರ್ತನೆ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ. ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎಂಬುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ.

ನಮ್ಮನ್ನೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡ್ತೀರಾ?ಆದರೆ ಎದುರು ಪಕ್ಷದ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಕುಣಿದಿರಿ. ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ ನೀವು. ಅದು ಕ್ರೈಂ ಅಲ್ವಾ? ಎಂದು ಪ್ರಶ್ನಿಸಿದರು.
ನೀವು ಏನೇನೂ ಮಾಡಿದ್ದೀರಾ ಅಂತ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ವಾಚ್ ಮಾಡಿದ್ದೇವೆ.ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯೊಲ್ಲ. ನೀವು ಬದಲಾಗಬೇಕು. ನಿಮ್ಮ ವರ್ತನೆ ಬದಲಾಗಬೇಕು. ಇಲ್ಲ ಅಂದ್ರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ. ನಾವು ದ್ವೇಷ ಸಾಧಿಸೋದಿಲ್ಲ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ. ಜನರ ನೆಮ್ಮದಿ ಕಾಪಾಡಿ. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳಿ. ಈ ಸರ್ಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ನೀಡಿ ಎಂದು ತಾಕೀತು ಮಾಡಿದರು.

Translate »