ಜನಪರ, ರೈತಪರ ಬಜೆಟ್
ಮೈಸೂರು

ಜನಪರ, ರೈತಪರ ಬಜೆಟ್

March 9, 2021

ಮೈಸೂರು, ಮಾ.8(ಆರ್‍ಕೆಬಿ)- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿರುವ 8ನೇ ಬಜೆಟ್ ಜನಪರ ಹಾಗೂ ರೈತಪರವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಬಣ್ಣಿಸಿದ್ದಾರೆ.

ಮಾಧ್ಯಮಗಳಿಗೆ ನೀಡಿರುವ ಪ್ರತಿಕ್ರಿಯೆಯಲ್ಲಿ ಕೊರೊನಾ ಸಂಕಷ್ಟ ಕಾಲದಲ್ಲೂ ಆರ್ಥಿಕವಾಗಿ ಚೇತರಿಕೆ ಸಿಗುವಂತಹ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ. ಸಹಕಾರಿ ವಲಯದ ಮೂಲಕವೂ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದು, ರೈತರಿಗೆ ಹಾಗೂ ನಾಗರಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ರಾಜ್ಯದ ಜನತೆ ಪರವಾಗಿ ಹಾಗೂ ವೈಯಕ್ತಿಕವಾಗಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು (PಂಅS) ಟಿಎಸಿಎಸಿಎಂಎಸ್‍ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಸಂಗ್ರಹಣಾ ಶುಲ್ಕದ ಶೇ.25 ಸಹಾಯಧನ ವಿತರಣೆಗೆ 25 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದರಿಂದ ರೈತರಿಗೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (PಂಅS) ಹಾಗೂ ಟಿಎಸಿಎಸಿ ಎಂಎಸ್‍ಗಳಲ್ಲಿ ಸಂಗ್ರಹಿಸಿದ ಕೃಷಿ ಉತ್ಪನ್ನಗಳ ಮೇಲೆ ಶೇ. 11ರ ದರದಲ್ಲಿ ವಿತರಿಸಿದ ಅಡಮಾನ ಸಾಲ ಸೌಲಭ್ಯಕ್ಕೆ 6 ತಿಂಗಳ ಅವಧಿಗೆ ಸರ್ಕಾರದಿಂದ ಶೇ.4ರ ಬಡ್ಡಿ ಸಹಾಯಧನ ನೀಡುವ ಸಂಬಂಧ 5 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದೂ ಸಹ ರೈತರಿಗೆ ವರದಾನವಾಗಿದೆ ಎಂದಿದ್ದಾರೆ.
198 ಕೋಟಿ ರೂಪಾಯಿ ವೆಚ್ಚದಲ್ಲಿ 5,500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಮಾಡುವುದಾಗಿ ಘೋಷಣೆ ಮಾಡಲಾಗಿರುವುದು ಸ್ವಾಗತಾರ್ಹ ಕ್ರಮ. ಇದರಿಂದ ರೈತರಿಗೆ ಇನ್ನಷ್ಟು ತ್ವರಿತವಾಗಿ ಸಾಲ ನೀಡಿಕೆ ಸುಲಭವಾಗುವು ದಲ್ಲದೆ, ಸರ್ಕಾರದ ಪ್ರಯೋಜನಗಳನ್ನು ಬಹುಬೇಗ ತಲುಪಿ ಸಲು ಸಹಾಯಕವಾಗಲಿದೆ. ಅಲ್ಲದೆ, ಪಾರದರ್ಶಕ ವ್ಯವಸ್ಥೆಗೂ ಇದು ಮುನ್ನುಡಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಗೆ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಶೇ.25ರಷ್ಟು ಷೇರು ಬಂಡವಾಳ ಒದಗಿಸಲು ಕ್ರಮ ಕೈಗೊಂಡಿರುವುದು ಸಹ ಸ್ವಾಗತಾರ್ಹ ಕ್ರಮವಾಗಿದೆ. ಬೈಯಪ್ಪನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೂವಿನ ಮಾರುಕಟ್ಟೆ ನಿರ್ಮಾಣ ಹಾಗೂ ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರು ಕಟ್ಟೆ ನಿರ್ಮಾಣ, ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನ ಕಾಯಿ ಮಾರುಕಟ್ಟೆ ಸ್ಥಾಪನೆ, ಚಾಮರಾಜನಗರ ದಲ್ಲಿ ಅರಿಶಿಣ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ, ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ ಮಾಡುವುದಾಗಿ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು, ಇದರಿಂದ ರೈತರ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ. ಉತ್ತಮ ಬೆಲೆ ದೊರೆಯುವು ದಲ್ಲದೆ, ದೇಶ-ವಿದೇಶ ಮಟ್ಟದಲ್ಲಿ ಹೆಸರು ಗಳಿಸಲು, ಪೈಪೆÇೀಟಿ ನಡೆಸಲು ಇದು ಸಹಾಯಕವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Translate »