ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ
ಮೈಸೂರು

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ

August 26, 2019

ನವದೆಹಲಿ, ಆ.25- ಕೊನೆಗೂ ಖಾತೆ ಹಂಚಿಕೆಗೆ ಕಾಲ ಕೂಡಿ ಬಂದಿದ್ದು, ನಾಳೆ ಬೆಳಿಗ್ಗೆ 9 ಗಂಟೆಗೆ ಖಾತೆಗಳ ಪಟ್ಟಿ ರವಾನೆಯಾಗಲಿದೆ. ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾತೆ ಹಂಚಿಕೆ ಬಳಿಕ ನಾಳೆ ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ನೆರೆ ಪರಿಸ್ಥಿತಿ ಬಗ್ಗೆ ವರದಿ ಕೇಳಿದ್ದೆ, ನಾಳೆ ವರದಿ ಪಡೆದು ಮುಂದಿನ ಕಾರ್ಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇತ್ತೀಚೆಗೆ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ. ಹೀಗಾಗಿ ರಾಜ್ಯಕ್ಕೆ ಮೊದಲು ಅಧ್ಯಯನ ತಂಡ ಕಳುಹಿಸಲಾಗಿದೆ. ತಂಡ ಈಗಾಗಲೇ ಅಧ್ಯಯನ ಪ್ರಾರಂಭಿಸಿದ್ದು, ವರದಿ ನೀಡಿದ ಬಳಿಕ ಹೆಚ್ಚಿನ ನೆರವು ಪಡೆಯಲಿ ದ್ದೇವೆ ಎಂದರು. ಉಪ ಮುಖ್ಯಮಂತ್ರಿ ಹುದ್ದೆ ಇರುತ್ತದೆ. ಯಾರು, ಎಷ್ಟು ಎಂಬುದು ನಾಳೆ ಗೊತ್ತಾಗುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಡಿಸಿಎಂ ಹುದ್ದೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ಸೂಚನೆಗಳನ್ನು ಪಾಲಿಸುತ್ತೇವೆ. ಎಷ್ಟು ಡಿಸಿಎಂ ಸ್ಥಾನ ಅನ್ನೊದು ಚರ್ಚೆ ನಡೆಯುತ್ತಿದೆ. ನಾಳೆ ಅಂತಿಮವಾಗಿ ಗೊತ್ತಾಗಲಿದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಸ್ಥಾನ ಮಾನ ನೀಡಲಾಗು ವುದು ಎಂದು ಸ್ಪಷ್ಟಪಡಿಸಿದರು. ಅನರ್ಹ ಶಾಸಕರ ಬಗ್ಗೆ ಮಾತನಾಡುವುದಿಲ್ಲ. ಈ ಕುರಿತು ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಈಗೇನಿದ್ದರೂ ಸಮಸ್ಯೆ ಕಾಂಗ್ರೆಸ್ -ಜೆಡಿಎಸ್‍ನಲ್ಲಿ ಮಾತ್ರ ಎಂದು ಅನರ್ಹ ಶಾಸಕರ ಕುರಿತು ಬಿಎಸ್‍ವೈ ಮಾತನಾಡನಲಿಲ್ಲ. ಲಕ್ಷ್ಮಣ ಸವದಿ ಬಗ್ಗೆ ಕೆಲವು ಶಾಸಕರು ಹಾಗೂ ನಾಯಕರಲ್ಲಿ ಅಸಮಾಧಾನ ಇರುವುದು ನಿಜ. ಹೈಕ ಮಾಂಡ್ ನಿರ್ದೇಶನದ ಮೇರೆಗೆ ಸವದಿಗೆ ಅವಕಾಶ ನೀಡಲಾಗಿದೆ. ಬೆಳಗಾವಿಯಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Translate »