ಬೆಂಗಳೂರು, ಸೆ.22-ಚುನಾವಣಾ ಆಯೋಗ ಘೋಷಣೆ ಮಾಡಿರುವ ಉಪಚುನಾವಣೆ ವೇಳಾಪಟ್ಟಿಗೆ ಕರ್ನಾ ಟಕದ ಅನರ್ಹ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಉಪಚುನಾವಣೆಯನ್ನು ಮುಂದೂಡುವಂತೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲ ಗಳು ತಿಳಿಸಿವೆ. ಅನರ್ಹಗೊಂಡ ಕರ್ನಾ ಟಕದ ಒಟ್ಟು 15 ಶಾಸಕರು ಉಪಚುನಾ ವಣೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲು ಮುಂದಾ ಗಿದ್ದಾರೆ. ಇದೇ ಕಾರಣಕ್ಕೆ ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ತುರ್ತು ಭೇಟಿ ಮಾಡಿ ಚರ್ಚೆ ನಡೆಸಿ ದ್ದಾರೆ ಎನ್ನಲಾಗಿದೆ. ಚರ್ಚೆ ಬಳಿಕ ಅನರ್ಹ ಶಾಸಕರು ಈ ನಿರ್ಧಾರಕ್ಕೆ ಬಂದಿದ್ದು, ಸೋಮವಾರವೇ ಈ ಕುರಿ ತಂತೆ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಇದೇ ವಿಚಾರ ವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ರುವ ಬೃಹತ್ ಕೈಗಾರಿಕೆ ಸಚಿವ ಜಗ ದೀಶ್ ಶೆಟ್ಟರ್ ಅವರು, ಉಪ ಚುನಾ ವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿ ಸಲು ಯಾವುದೇ ರೀತಿ ಅಡ್ಡಿ ಇಲ್ಲ, ಸೋಮವಾರ ಸುಪ್ರೀಂಕೋರ್ಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು. ಅಂತೆಯೇ ಡಿಸಿಎಂ ಲಕ್ಷ್ಮಣ ಸವದಿ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಅನರ್ಹ ಶಾಸಕರು ಚುನಾವಣೆ ಯಲ್ಲಿ ಸ್ಪರ್ಧಿಸುತ್ತಾರಾ ಎಂಬುದು ಗೊತ್ತಿಲ್ಲ. ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕ ಮಾಂಡ್ ನಿರ್ಧಾರ ಮಾಡುತ್ತದೆ. ತಮ್ಮ ಪ್ರಕಾರ ಅವರು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ಅಡ್ಡಿ, ಆತಂಕ ಇಲ್ಲ ಎಂದು ಹೇಳಿದರು.