ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವ ದಿನಾಂಕ ಮುಂದೂಡಿಕೆ
ಮೈಸೂರು

ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವ ದಿನಾಂಕ ಮುಂದೂಡಿಕೆ

June 5, 2020

ಮೈಸೂರು, ಜೂ.4- ಶಾಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದ್ದ ದಿನಾಂಕವನ್ನು ಜೂ.8ಕ್ಕೆ ಮುಂದೂಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಶಿಕ್ಷಕರು ದೂರದ ಊರುಗಳಿಗೆ ಅಥವಾ ಸ್ವಗ್ರಾಮಕ್ಕೆ ತೆರಳಿದ್ದಾರೆ. ಸದ್ಯಸಾರಿಗೆ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಸೂಚಿತ ದಿನಾಂಕದಂದು ಕರ್ತವ್ಯಕ್ಕೆ ಹಾಜ ರಾಗಲು ಸಾಧ್ಯವಾಗುವುದಿಲ್ಲ ಎಂದು ಕರ್ನಾ ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರ ಗಮನ ಸೆಳೆದಿತ್ತು.

ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕರು ಮಾತ್ರ ಜೂ.5ರಂದು ಶಾಲೆಗೆ ಹಾಜರಾಗಬೇಕು. ಉಳಿದಂತೆ ಎಲ್ಲಾ ಶಿಕ್ಷಕರೂ ಜೂ.8ರಂದು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಇಲಾಖೆ ಸುತ್ತೋಲೆ ಹೊರಡಿಸಿದೆ.

Translate »