ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ
ಕೊಡಗು

ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

April 24, 2021

ಮಡಿಕೇರಿ, ಏ.23- ಕುಶಾಲನಗರ 220/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಹೆಬ್ಬಾಲೆ, ಭುವನಗರಿ ಎಫ್6 ಇಂಡಸ್ಟ್ರಿಯಲ್ ಏರಿಯಾ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಏಪ್ರಿಲ್, 24 ಮತ್ತು 25 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಹೆಬ್ಬಾಲೆ, ಕಣಿವೆ, ಹಕ್ಕೆ, ಹಳೆಗೋಟೆ, ಭುವನಗಿರಿ, ಯಡವನಾಡು, ಹುದುಗೂರು, ಹಾರಂಗಿ, ದೊಡ್ಡತ್ತೂರು, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Translate »