ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದ ಎನ್.ಆರ್ ಮೊಹಲ್ಲಾ ವಿಭಾಗದ ವತಿ ಯಿಂದ 66/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರ ದಿಂದ ಹೊರಹೊಮ್ಮುವ 11 ಕೆ.ವಿ. ಇಂಡಸ್ಟ್ರಿಯಲ್ ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಫೆ.17ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆ ವರೆಗೆ ಇಂಡಸ್ಟ್ರಿಯಲ್ ಸಬರ್ಬ್, ವಿಶ್ವೇಶ್ವರ ನಗರ ಸುತ್ತಮುತ್ತ ಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಎನ್.ಆರ್ ಮೊಹಲ್ಲಾ ವಿಭಾಗದ ವತಿಯಿಂದ 220/66/11 ಏಗಿ ಕಡಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ 11 ಕೆ.ವಿ. ಆಯರಹಳ್ಳಿ (ಈ-2) ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳ ಲಾಗಿದೆ. ಫೆ.17ರಂದು ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಕೆ.ಐಎಡಿಬಿ ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.