ನಾಳೆ ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ನಾಳೆ ವಿವಿಧೆಡೆ ವಿದ್ಯುತ್ ನಿಲುಗಡೆ

April 23, 2019

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಏ.24ರಂದು 66/11 ಕೆ.ವಿ ದೇವನೂರು (ಮೈಸೂರು) ವಿದ್ಯುತ್ ವಿತರಣಾ ಕೇಂದ್ರಗಳಿಂದ 11 ಕೆ.ವಿ. ಕಾವೇರಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಏ.24 ರಂದು ಬೆಳಿಗ್ಗೆ 11ರಿಂದ ಸಂಜೆ 4 ಗಂಟೆವರೆಗೆ ಡಾ|| ರಾಜ್ ಕುಮಾರ್ ರಸ್ತೆ, ಸಾತಗಳ್ಳಿ, ಕಲ್ಯಾಣಗಿರಿ, ಎಲ್.ಐ.ಜಿ, ಎಂ.ಐ.ಜಿ. ಮನೆಗಳು, ಗೌಸಿಯಾನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ನ.ರಾ. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »