ಪಪಂ ಚುನಾವಣೆ; ಬಿಜೆಪಿ ಅಭ್ಯರ್ಥಿ ಪರ ಶಾಸಕ ಬೋಪಯ್ಯ ಪ್ರಚಾರ
ಕೊಡಗು

ಪಪಂ ಚುನಾವಣೆ; ಬಿಜೆಪಿ ಅಭ್ಯರ್ಥಿ ಪರ ಶಾಸಕ ಬೋಪಯ್ಯ ಪ್ರಚಾರ

October 23, 2018

ವಿರಾಜಪೇಟೆ: ವಿರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಕಳೆದ ಐದು ವರ್ಷಗಳಿಂದ ಬಿಜೆಪಿ ಆಡಳಿತ ನಡೆಸಿ ಬಂದ ಅನುದಾನದಲ್ಲಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.

ಪಟ್ಟಣ ಪಂಚಾಯಿತಿ ಚುನಾವಣೆಗೆ ಅರಸು ನಗರದ ಎರಡನೇ ವಾರ್ಡ್‍ನಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ವಿಷ್ಣು ಅವರ ಪರ ಚುನಾವಣಾ ಪ್ರಚಾರ ಕೈಗೊಂಡ ಅವರು ಮಾತನಾಡುತ್ತಾ, ಪಂಚಾಯಿತಿಯ ರೂ, ಐದು ಕೋಟಿ ಅನುದಾನದಲ್ಲಿ. ಪಟ್ಟಣ ವ್ಯಾಪ್ತಿಯ ರಸ್ತೆ, ತಡೆಗೋಡೆ, ವಿದ್ಯುತ್ ಹಾಗೂ ಜನತೆಗೆ ನೀರಿನ ಸೌಲಭ್ಯಕ್ಕಾಗಿ ರೂ,1,70 ಕೋಟಿ ಅನುದಾನದಲ್ಲಿ ಕಾಮಗಾರಿ ಗಳನ್ನು ಕೈಗೊಳ್ಳಲಾಗಿದೆ. ಎಂದರಲ್ಲದೆ. ಈ ಬಾರಿ ಪಪಂ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತದಾರರು ಬೆಂಬಲಿಸುವಂತೆ ಕೋರಿದರು. ಚುನಾವಣಾ ಪ್ರಚಾರದ ಸಂದರ್ಭ ಜಿಲ್ಲಾ ಬಿಜೆಪಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಕಾರ್ಯದರ್ಶಿ ಕಿಲನ್ ಗಣಪತಿ, ಮಡಿಕೇರಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಇಲ್ಲಿನ ಅಭ್ಯರ್ಥಿ ಪಿ.ವಿಷ್ಣು, ಸಚಿನ್ ಕುಟ್ಟಯ್ಯ, ಸ್ಥಳೀಯ ರಾದ ಧಿವಕರ್ ಭಟ್, ಹೆಚ್.ಕೆ.ಗಣೇಶ್, ಮುಂತಾದವರು ಉಪಸ್ಥಿತರಿದ್ದರು.

Translate »