ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ
ಮಂಡ್ಯ

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ

July 8, 2018

ಮಂಡ್ಯ: 2018ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನ ಗೊಳಿಸಲು ಮಂಜೂರಾತಿ ನೀಡಲಾಗಿದೆ.

ಗ್ರಾಪಂ: ಭತ್ತ ನೀರಾವರಿ ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ, ರಾಗಿ (ಮಳೆ ಆಶ್ರಿತ) ಬೆಳೆಗೆ ನಾಗಮಂಗಲ ಮತ್ತು ಪಾಂಡವಪುರ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ, ಮುಸುಕಿನಜೋಳ (ಮಳೆ ಆಶ್ರಿತ) ಬೆಳೆಗೆ ಮಳವಳ್ಳಿ ತಾಲೂಕಿನ ಅಧಿಸೂಚಿತ ಗ್ರಾಪಂಗಳಲ್ಲಿ ರೈತರು ವಿಮೆಗೆ ನೋಂದಾಯಿಸಿಕೊಳ್ಳಬಹುದು.

ಹೋಬಳಿ ಮಟ್ಟ: ಭತ್ತ (ನೀರಾವರಿ, ಮಳೆ ಆಶ್ರಿತ), ರಾಗಿ (ನೀರಾವರಿ, ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ, ಮಳೆ ಆಶ್ರಿತ), ತೊಗರಿ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ನೆಲಗಡಲೆ (ಮಳೆ ಆಶ್ರಿತ), ಅಲಸಂದೆ (ಮಳೆ ಆಶ್ರಿತ), ಟೊಮ್ಯಾಟೋ, ಎಲೆಕೋಸು ಬೆಳೆಗಳಿಗೆ ಅಧಿಸೂಚಿತ ಹೋಬಳಿಗಳಲ್ಲಿ ರೈತರು ವಿಮೆಗೆ ನೋಂದಾ ಯಿಸಬಹುದಾಗಿದೆ.
ಅಧಿಸೂಚಿಸಲಾದ ಬೆಳೆಗಳಿಗೆ ವಿಮಾ ಪ್ರಸ್ತಾವನೆ ಸಲ್ಲಿಸಲು ಕೊನೆ ದಿನಾಂಕದ ವಿವರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ವಿವರಗಳ ಬಗ್ಗೆ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಿ.

Translate »