ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಇಂದು ಶಿಕ್ಷೆ ಪ್ರಮಾಣ ಪ್ರಕಟ

ನವದೆಹಲಿ: ಅಡ್ವೊಕೇಟ್ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕ ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶಿಕ್ಷೆಯ ಪ್ರಮಾಣವನ್ನು ನಾಳೆ (ಸೋಮವಾರ) ಪ್ರಕಟಿಸಲಿದೆ. ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನ್ಯಾಯಾಂಗ ನಿಂದನೆ ಕಾಯ್ದೆಯಡಿ ನಾಳೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಆರು ತಿಂಗಳು ಜೈಲುಶಿಕ್ಷೆ ಅಥವಾ 2 ಸಾವಿರ ದವರೆಗೆ ದಂಡ ಅಥವಾ ದಂಡ ಮತ್ತು ಜೈಲುಶಿಕ್ಷೆ ಎರಡೂ ಶಿಕ್ಷೆಯನ್ನು ಪ್ರಶಾಂತ್ ಭೂಷಣ್ ಎದುರಿಸಬೇಕಾಗಬಹುದು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಟೀಕಿಸಿ ಅಡ್ವೊ ಕೇಟ್ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದು ವಿವಾದವೆಬ್ಬಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಪ್ರಶಾಂತ್ ಭೂಷಣ್ ಅವರನ್ನು ಅಪರಾಧಿ ಎಂದು ತೀರ್ಮಾನ ಮಾಡಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಅದಕ್ಕೆ ನಂತರ ಅವರು ಕ್ಷಮೆ ಕೋರಲು ನಿರಾಕರಿಸಿದ್ದರು. ನಂತರ ಆಗಸ್ಟ್ 25ರಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಪರ ವಕೀಲ ರಾಜೀವ್ ಧವನ್, ನ್ಯಾಯಾಲಯ ತನ್ನ ತೀರ್ಪನ್ನು ಹಿಂತೆಗೆದುಕೊಂಡು ನ್ಯಾಯಾಂಗ ನಿಂದನೆ ಆರೋಪಕ್ಕೆ ಯಾವುದೇ ಶಿಕ್ಷೆ ವಿಧಿಸದಂತೆ ಕೋರಿದ್ದರು. ಕೇಸಿಗೆ ಇತಿಶ್ರೀ ಹಾಡುವಂತೆ ಕೋರಿದ್ದರು.