ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮ ವಾರ ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ. ಕಮಲ್ ಪಂತ್ ಅವ ರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ
ಆಗಿದ್ದ ಅಲೋಕ್‌ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ(ಪ್ರಭಾರ) ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ. ಇನ್ನೂ ಬೆಂಗ ಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಅವರನ್ನು ಸಿಐಡಿ ಎಸ್‌ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.
ಮೈಸೂರು