ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
ಮೈಸೂರು

ಪ್ರತಾಪ್ ಸಿಂಹ ಸೇರಿ ರಾಜ್ಯದ 8 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

May 25, 2019

ನವದೆಹಲಿ: ನರೇಂದ್ರ ಮೋದಿಯವರ ಕೇಂದ್ರ ಸಂಪುಟದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎಂಟು ಮಂದಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

25 ಸಂಸದರನ್ನು ನೀಡಿರುವ ಕರ್ನಾಟಕಕ್ಕೆ ಹೆಚ್ಚಿನ ಸಚಿವ ಸ್ಥಾನಗಳು ಸಿಗಬಹುದು ಎಂದು ಹೇಳಲಾಗಿದ್ದು, ಒಕ್ಕಲಿಗ ಸಮಾಜದವರಾದ ಯುವ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದೆ.

ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಫಾರಸ್ಸು ಮಾಡುವ ಸಾಧ್ಯತೆ ಇದೆ. ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಡಿ.ವಿ.ಸದಾನಂದಗೌಡರು ಮತ್ತೊಮ್ಮೆ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ಅವಕಾಶವಿದೆ.

ದಿವಂಗತ ಅನಂತಕುಮಾರ್ ಅವರ ಸ್ಥಾನ ತುಂಬಲು ಬ್ರಾಹ್ಮಣ ಸಮುದಾಯದವರಾದ ಪ್ರಹ್ಲಾದ್ ಜೋಷಿಯವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಹಿರಿಯ ಸಂಸದರಾದ ರಮೇಶ್ ಜಿಗಜಿಣಗಿ ಅವರು ಪರಿಶಿಷ್ಟ ಜಾತಿಯ ಎಡಗೈ ಬಣಕ್ಕೆ ಸೇರಿದವರಾಗಿದ್ದು, ಈ ಸಮುದಾಯಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅವರಿಗೆ ಸಂಪುಟದಲ್ಲಿ ಸ್ಥಾನ ಲಭಿಸುವ ಸಾಧ್ಯತೆಗಳಿವೆ.

ಸೋಲಿಲ್ಲದ ಸರದಾರರಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಣಿಸಿದ ಉಮೇಶ್ ಜಾಧವ್ ಮತ್ತು ಭಗವಂತ ಖೂಬಾ ಸಹ ಕರ್ನಾಟಕದಿಂದ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯುವರು ಎಂದು ಹೇಳಲಾಗಿದೆ.

Translate »