ಜೂ.15, ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ಮೈಸೂರು

ಜೂ.15, ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

June 7, 2018

ಮೈಸೂರು:  ಆರ್ಯ ಈಡಿಗ ಸಮಾಜದ (ಈಡಿಗ, ಬಿಲ್ಲವ, ಹೆಳವ ಇತ್ಯಾದಿ) ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜೂ.15ರಂದು ಮೈಸೂರಿನ ಹೆಬ್ಬಾಳದ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಆರ್ಯ ಈಡಿಗ ಸಂಘ, ಈಡಿಗ ನೌಕರರ ಸಂಘ, ಆರ್ಯ ಈಡಿಗ ಮಹಿಳಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. 2017-18ನೇ ಸಾಲಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.80 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಅರ್ಹ ವಿದ್ಯಾರ್ಥಿಗಳು ಮೈಸೂರಿನ ಕೃಷ್ಣಮೂರ್ತಿಪುರಂ ನ್ಯೂ ಕಾಂತರಾಜೇ ಅರಸ್ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜೂ.13ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿ.ಜಯಣ್ಣ, ಮೊ- 9480190336, ಸ್ವಾಮಿ, ಮೊ- 9341916963 ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಮೈಸೂರು-ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಕೃಷ್ಣಮೂರ್ತಿ, ಸಂಘದ ಮೈಸೂರು ಜಿಲ್ಲಾ ಉಪಾಧ್ಯಕ್ಷ ರಾಜಶೇಖರ ಕದಂಬ, ಆರ್ಯ ಈಡಿಗ ಮಹಿಳಾ ಸಂಘದ ಅಧ್ಯಕ್ಷೆ ಸರೋಜಮ್ಮ ಪಾಪೇಗೌಡ, ನೌಕರರ ಸಂಘದ ಕಾಯರ್Àದರ್ಶಿ ಜಯಣ್ಣ ಉಪಸ್ಥಿತರಿದ್ದರು.

Translate »