ನಾಳೆ ಗುತ್ತಿಗೆದಾರರ ಸಂಘದಿಂದ ಪ್ರತಿಭಾ ಪುರಸ್ಕಾರ
ಮೈಸೂರು

ನಾಳೆ ಗುತ್ತಿಗೆದಾರರ ಸಂಘದಿಂದ ಪ್ರತಿಭಾ ಪುರಸ್ಕಾರ

June 7, 2019

ಮೈಸೂರು: ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಜೂ.8ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಜೆ.ಕೆ. ಮೈದಾನದ ಅಮೃತ ಭವನದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಉಪಾಧ್ಯಕ್ಷ ಸಿ.ರಮೇಶ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಚಿವ ಸಾ.ರಾ.ಮಹೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಚೆಸ್ಕಾಂ ವ್ಯವ ಸ್ಥಾಪಕ ನಿರ್ದೇಶಕ ಡಾ.ಎಚ್.ಎನ್.ಗೋಪಾಲಕೃಷ್ಣ, ಬೆಂಗಳೂರಿನ ಕೆಇಐ ಇಂಡಸ್ಟ್ರೀಸ್ ಜೆ.ಕೆ.ಅನಿಲ್‍ಕುಮಾರ್ ಭಾಗವಹಿಸುವರು. ಜಿಲ್ಲಾಧ್ಯಕ್ಷ ಎಂ.ಆರ್.ಧರ್ಮವೀರ್ ಅಧ್ಯಕ್ಷತೆ ವಹಿಸುವರು ಎಂದರು. ಚೆಸ್ಕಾಂ ವ್ಯಾಪ್ತಿಯ ಐದು ಜಿಲ್ಲೆಗಳ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 141 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಗುವುದು. ಈ ಪೈಕಿ 19 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಪಡೆದವರಾಗಿದ್ದಾರೆ ಎಂದರು. ವಿವಿಧ ವಿಭಾಗದಲ್ಲಿ ಏಳು ಅಂತಾ ರಾಷ್ಟ್ರೀಯ ದಾಖಲೆ, ಬಹುಮಾನ ಪಡೆದಿರುವ ಗುತ್ತಿಗೆದಾರರು ಮತ್ತು ಅವರ ಮಕ್ಕಳನ್ನು ಇದೇ ವೇಳೆ ಗೌರವಿಸಲಾಗುವುದು ಎಂದು ಹೇಳಿದರು. ಧರ್ಮವೀರ್, ವೆಂಕಟೇಶ್ ಮೂರ್ತಿ, ಎಚ್.ಜೆ.ರಾಘವೇಂದ್ರ, ವಿಜಯಕುಮಾರ್, ಗಿರೀಶ್ ಉಪಸ್ಥಿತರಿದ್ದರು.

Translate »