ನಾಳೆ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಚಾಮರಾಜನಗರ

ನಾಳೆ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

September 21, 2018

ಚಾಮರಾಜನಗರ:  ನಗ ರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಇರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸೆ.22 ರಂದು ಬೆಳಿಗ್ಗೆ 10 ಗಂಟೆಗೆ 2017- 18ನೇ ಸಾಲಿನ ಜಿಲ್ಲಾ ವ್ಯಾಪ್ತಿಯ ಉಪ್ಪಾರ ಜನಾಂಗದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಉಪ್ಪಾರ ಸಂಘ ಕಾರ್ಯಕ್ರಮ ಏರ್ಪಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜನಾಂಗದ ಹಿರಿಯ ಮುಖಂಡರು, ಸಂಘದ ಪದಾಧಿಕಾರಿಗಳು, ಗಡಿಮನೆ, ಕಟ್ಟೆಮನೆ, ಯಜಮಾನರುಗಳು, ಸಮಾಜದವರು ಆಗಮಿ ಸುವಂತೆ ಸಂಘದ ಪ್ರಧಾನ ಕಾರ್ಯ ದರ್ಶಿ ಎಂ.ಚಿಕ್ಕಮಹದೇವ್ ಕೋರಿದ್ದಾರೆ.

Translate »