ಕೊಡಗು ಜಿಲ್ಲೆಯಲ್ಲಿ ಕೇಂದ್ರ ಸಚಿವ ಅನಂತ್‌ಕುಮಾರ್‌ಗೆ ಭಾವನಮನ

ಮಡಿಕೇರಿ:  ಕೇಂದ್ರ ರಸ ಗೊಬ್ಬರ ಖಾತೆ ಸಚಿವ ಅನಂತ್‍ಕುಮಾರ್ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂತಾಪ ಸೂಚನಾ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸಚಿವ ಅನಂತ್‍ಕುಮಾರ್ ಅವರ ಭಾವಚಿತ್ರಕ್ಕೆ ಪ್ಪುಷ್ಪಾರ್ಚನೆ ಸಲ್ಲಿಸಿದ ಬಿಜೆಪಿ ಮುಖಂಡರು 1 ನಿಮಿಷ ಮೌನಾಚರಣೆಯ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜ ಪೇಯಿ, ಮಾಜಿ ಬಿಜೆಪಿ ರಾಷ್ಟ್ರಾಧ್ಯಕ್ಷ ಎಲ್.ಕೆ. ಅಡ್ವಾಣಿ ಅವರೊಂದಿಗೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ಸಚಿವ ಅನಂತ್ ಕುಮಾರ್, ಅತ್ಯುತ್ತಮ ರಾಜಕೀಯ ಸಲಹೆಗಾರರಾಗಿ ಜನಾನು ರಾಗಿ ವ್ಯಕ್ತಿಯಾಗಿ ಸರ್ವ ಪಕ್ಷಗಳೊಂದಿಗೆ ಆತ್ಮೀಯತೆ ಹೊಂದಿದ್ದರು. ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರ ಪಕ್ಷಗಳು ಕೂಡ ರಾಜಕೀಯ ಸಮಸ್ಯೆ ಎದುರಾದಾಗ ಸಚಿವ ಅನಂತ್‍ಕುಮಾರ್ ಸಲಹೆ ಪಡೆಯುತ್ತಿದ್ದರು ಎಂದು ಸ್ಮರಿಸಿದರು.

ರಾಜ್ಯದಲ್ಲಿ ಬಿಜೆಪಿಯನ್ನು ಮೊಟ್ಟ ಮೊದಲ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಅನಂತ್ ಕುಮಾರ್ ಅವರ ಪಾತ್ರ ಮಹತ್ವದ್ದು. ಅವರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸುನೀಲ್ ಸುಬ್ರಮಣಿ ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಕಾರ್ಯಕರ್ತರಾಗಿ ರಾಷ್ಟ್ರಮಟ್ಟಕ್ಕೆ ಬೆಳೆದ ಅನಂತ್ ಕುಮಾರ್ ಕೇಂದ್ರ ರಸಗೊಬ್ಬರ ಖಾತೆಯನ್ನು ಕೂಡ ಯಶ್ವಸಿಯಾಗಿ ನಿರ್ವಹಿಸಿ ರೈತರಿಗೆ ಸಕಾಲ ದಲ್ಲಿ ಗೊಬ್ಬರ ಪೂರೈಸುವ ಮಹತ್ವದ ಕಾರ್ಯ ನೆರವೇರಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರವನ್ನು 6 ಬಾರಿ ಪ್ರತಿನಿಧಿಸಿ ಜಯಶಾಲಿಯಾದ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬಿಜೆಪಿ ಯ ಭದ್ರಕೋಟೆಯನ್ನಾಗಿಸಿದ್ದರು ಎಂದು ಸ್ಮರಿಸಿದರು. ಸಂತಾಪ ಸಭೆಯಲ್ಲಿ ನಗರ ಬಿಜೆಪಿ ಪ್ರಮುಖರಾದ ಬಿ.ಕೆ. ಅರುಣ್, ಉಮೇಶ್ ಸುಬ್ರಮಣಿ, ಬಿ.ಕೆ. ಜಗದೀಶ್, ಮನು ಮಂಜುನಾಥ್, ಅನಿತಾ ಪೂವಯ್ಯ ಮತ್ತಿತ್ತರರು ಉಪಸ್ಥಿತರಿದ್ದರು.

ವಿರಾಜಪೇಟೆ ವರದಿ: ಬಿಜೆಪಿ ಪಕ್ಷದ ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ಬಿಜೆಪಿ ನಾಯಕರು ವಿರಾಜಪೇಟೆ ಶಾಸಕರ ಕಛೇರಿಯಲ್ಲಿ ಅನಂತ್ ಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು.

ಸಂತಾಪ ಸಭೆಯಲ್ಲಿ ಜಿಲ್ಲಾ ಬಿಜೆಪಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ರಾದ ಮೂಕೊಂಡ ಶಶಿ ಸುಬ್ರಮಣಿ, ಅಚ್ಚಪಂಡ ಮಹೇಶ್ ಗಣಪತಿ, ಪಕ್ಷದ ನಗರ ಅಧ್ಯಕ್ಷ ಅನಿಲ್ ಮಂದಣ್ಣ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಸದಸ್ಯ ಬಿ.ಎಂ.ಗಣೇಶ್, ಪಟ್ಟಣ ಪಂಚಾಯಿತಿ ನೂತನ ಸದಸ್ಯರಾದ ಹರ್ಷ ವರ್ಧನ್, ಸುನಿತಾ, ಯಶೋಧ, ಅನಿತಾ, ಸುಭಾಷ್, ಸುಸ್ಮೀತಾ, ಪೂರ್ಣಿಮ, ಪಂಚಾಯಿತಿ ಮಾಜಿ ಅಧ್ಯಕ್ಷ ಇ.ಸಿ.ಜೀವನ್ ಹಾಗೂ ಕೂತಂಡ ಸಚಿನ್, ಮಾಜಿ ಸದಸ್ಯ ಕುಮಾರ್, ಪ್ರಮುಖರಾದ ಮಲ್ಲಂಡ ಮಧು ದೇವಯ್ಯ, ಕುಂಬೆಯಂಡ ಗಣೇಶ್, ಬಿ.ಜಿ. ಸಾಯಿನಾಥ್, ಹೇಮಂತ್, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಕಾರ್ಯದರ್ಶಿ ಜೋಕಿಂ ರಾಡ್ರಿಗಾಸ್ ಮುಂತಾದವರು ಉಪಸ್ಥಿತರಿದ್ದರು.

ಕುಶಾಲನಗರ ವರದಿ: ದೇಶ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ತನ್ನದೇ ಆದ ಪರಿಕಲ್ಪನೆಯನ್ನು ಹೊಂದಿದ್ದ ಕೇಂದ್ರ ಸಚಿವ ಅನಂತ್‍ಕುಮಾರ್ ನಿಧನ ಪಕ್ಷಕ್ಕೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ತುಂಬ ಲಾರದ ನಷ್ಟ ಉಂಟಾಗಿದೆ ಎಂದು ಬಿಜೆಪಿ ಪಕ್ಷದ ಹಿರಿಯ ಮುಖಂಡ ವಿ.ಎನ್. ವಸಂತಕುಮಾರ್ ಸಂತಾಪ ಸೂಚಿಸಿದರು.

ಇಲ್ಲಿನ ಐಬಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಅನಾರೋಗ್ಯದಿಂದ ನಿಧನರಾದ ಅನಂತ್ ಕುಮಾರ್ ಭಾವಚಿತ್ರಕ್ಕೆ ಪುಷ್ಪಹಾರ ಹಾಕಿ ಗೌರವ ಸಲ್ಲಿಸಿದರು.
ಅನಂತ್ ಕುಮಾರ್ ಅವರಲ್ಲಿರುವ ಚೈತನ್ಯ, ಮುಂದಾಲೋಚನೆ ಹಾಗೂ ಅವರು ತೆಗೆದುಕೊಳ್ಳುತ್ತಿದ್ದ ನಿರ್ಧಾರಗಳು ಇತರೆ ನಾಯಕರಿಗೆ ಸ್ಫೂರ್ತಿಯಾಗಿರುತ್ತಿತ್ತು. ಹಿರಿಯ ನಾಯಕರ ಪ್ರೀತಿ ಪಾತ್ರರಾಗಿದ್ದು, ಅವರು ಹೊಂದಿದ್ದ ಅಪಾರ ಜ್ಞಾನ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಕೊಳ್ಳಲು ಸಾಧ್ಯ ವಾಯಿತು ಎಂದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಪಕ್ಷದ ಸಂಘಟನೆ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದಿದ್ದರು. ಇಂತಹ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಿರುವುದು ಪಕ್ಷಕ್ಕೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ ಎಂದರು.

ನಗರ ಬಿಜೆಪಿ ಅಧ್ಯಕ್ಷ ಕೆ.ಜಿ.ಮನು, ಉಪಾ ಧ್ಯಕ್ಷ ಬೋಸ್ ಮೊಣ್ಣಪ್ಪ, ಜಿ.ಪಂ.ಸದಸ್ಯೆ ಕೆ.ಆರ್.ಮಂಜುಳಾ, ಪಪಂ ಸದಸ್ಯರಾದ ಡಿ.ಕೆ.ತಿಮ್ಮಪ್ಪ, ಮಾಜಿ ಸದಸ್ಯ ಮಧು ಸೂದನ್, ಪುಂಡಾ ರೀಕಾಕ್ಷ, ಟಿ.ಬಿ.ಜಗದಿಶ್, ಉಮಾಶಂಕರ್, ಲಕ್ಷ್ಮಣ ಇತರರು ಇದ್ದರು.