ಮಡಿಕೇರಿ: ಸಮಾಜದಲ್ಲಿ ಸಮಾನವಾಗಿ ಬದುಕು ಕಟ್ಟಿಕೊಳ್ಳಲು ಲಿಂಗಾ ನುಪಾತದಲ್ಲಿ ಸಮತೋಲನ ಇರಬೇಕು. ಆದ್ದರಿಂದ ಹೆಣ್ಣು ಮತ್ತು ಗಂಡಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂದು ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸ್ಥಳೀಯ ಜನಪ್ರತಿ ನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕರ್ತರಿಗೆ ನಗರದ ಖಾಸಗಿ ಹೋಟೆಲ್‍ನಲ್ಲಿ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಬುಧವಾರ ನಡೆದ ಕಾರ್ಯಾ ಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಸವ ಪೂರ್ವ ಲಿಂಗಪತ್ತೆ ಹಚ್ಚುವುದು ಅಪರಾಧವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡಬಾರದು. ಇದು ಅಪಾಯ ಕಾರಿ ಬೆಳವಣಿಗೆ ಎಂದರು.
ವಕೀಲ ಎಂ.ಎ.ನಿರಂಜನ ಮಾತನಾಡಿ, ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಇನ್ನೂ ಸಮರ್ಪಕವಾಗಿ ಅನುಷ್ಠಾನ ಗೊಳ್ಳುವಂತಾಗಬೇಕು ಎಂದು ಹೇಳಿದರು.
ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಸಮತೋಲನದಿಂದ ಇರಬೇಕು. ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡು ವುದು ಕಂಡುಬಂದಲ್ಲಿ ಕಠಿಣ ಕ್ರಮ ಎದುರಿ ಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತ ನಾಡಿ, ನಗರ ಆರೋಗ್ಯ ಅಭಿಯಾನ ಕಾರ್ಯ ಕ್ರಮದಡಿ ನಗರ ಮತ್ತು ಪಟ್ಟಣ ಪ್ರದೇಶದ ಜನರಿಗೆ ಆರೋಗ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ ಹೀಗೆ ಹಲವು ಇಲಾ ಖೆಗಳು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸು ವಂತಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಮಾತನಾಡಿ, ಪ್ರಸವ ಪೂರ್ವ ಭ್ರೂಣ ಲಿಂಗಪತ್ತೆಯನ್ನು ಅನುವಂಶೀಯ ಕಾಯಿಲೆಗಳನ್ನು ಪತ್ತೆಹಚ್ಚಲು ಆರಂಭಿ ಸಲಾಯಿತು. ಆದರೆ ಇದು ದುರುಪ ಯೋಗವಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ಕಾಯ್ದೆ ಜಾರಿಗೊಳಿಸ ಲಾಯಿತು ಎಂದು ಅವರು ಹೇಳಿದರು.
ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕೇಂದ್ರಗಳು ಕಡ್ಡಾಯವಾಗಿ ನೋಂದಣಿ ಮಾಡಿ ಪರವಾನಗಿ ಪಡೆಯಬೇಕು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು ಎಂದು ಅವರು ಹೇಳಿ ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಕೆ.ಸಿ.ದಯಾನಂದ ಮಾತ ನಾಡಿ, ಗಂಡು ಮತ್ತು ಹೆಣ್ಣು ಲಿಂಗಾನು ಪಾತದಲ್ಲಿ ಅಸಮತೋಲನ ಉಂಟಾದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾ ಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ಧಾರ್ಮಿಕ ಸಮಸ್ಯೆಗಳು ಉಲ್ಬಣಗೊಳ್ಳ ಲಿವೆ ಎಂದು ಹೇಳಿದರು.
2011ರ ಜನಗಣತಿ ಪ್ರಕಾರ ಕೇರಳ ರಾಜ್ಯ ದಲ್ಲಿ ಒಂದು ಸಾವಿರ ಪುರುಷರಿಗೆ 1084 ಮಹಿಳೆಯರಿದ್ದಾರೆ. ಕರ್ನಾಟಕದಲ್ಲಿ ಒಂದು ಸಾವಿರ ಪುರುಷರಿಗೆ 973 ಮಹಿಳೆಯ ರಿದ್ದಾರೆ. ಹರಿಯಾಣ ರಾಜ್ಯದಲ್ಲಿ ಒಂದು ಸಾವಿರ ಪುರುಷರಿಗೆ 879 ಮಹಿಳೆಯರಿ ದ್ದಾರೆ ಎಂದು ಮಾಹಿತಿ ನೀಡಿದರು.
ವಿಶ್ವದಲ್ಲಿ ಪ್ರತೀ ವರ್ಷ 56 ಮಿಲಿ ಯನ್ ಹೆಣ್ಣು ಭ್ರೂಣ ಹತ್ಯೆಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ಅವರು ಹೇಳಿದರು. ಪೌರಾಯುಕ್ತರಾದ ಎಂ.ಎಲ್.ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಪತ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ವ್ಯವ ಸ್ಥಾಪಕ ದೇವರಾಜು ಇತರರು ಇದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಿರಣ್ ಸ್ವಾಗತಿಸಿದರು.