ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಮುಂಜಾಗ್ರತಾ ಕ್ರಮ
ಮೈಸೂರು

ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಮುಂಜಾಗ್ರತಾ ಕ್ರಮ

June 24, 2020

ಎಲ್ಲಾ ಠಾಣೆಗಳ ಇನ್ಸ್‍ಪೆಕ್ಟರ್‍ಗಳಿಗೆ  ಡಿಸಿಪಿ ಡಾ.ಎ.ಎನ್.ಪ್ರಕಶ್‍ಗೌಡರ ಸೂಚನೆ

ಮೈಸೂರು, ಜೂ. 23 (ಆರ್‍ಕೆ)- ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಈ ಮಹಾಮಾರಿ ಸೋಂಕು ಸಮುದಾಯಕ್ಕೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಡಿಸಿಪಿ ಡಾ.ಎ.ಎನ್. ಪ್ರಕಾಶ್‍ಗೌಡ ಮೈಸೂರಿನ ಎಲ್ಲಾ ಪೊಲೀಸ್ ಠಾಣಾ ಇನ್ಸ್‍ಪೆಕ್ಟರ್‍ಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ಜ್ಞಾಪನ ಪತ್ರ ಹೊರಡಿಸಿರುವ ಅವರು, ಸಾರ್ವ ಜನಿಕರು ವ್ಯಾಪಾರ ಸ್ಥಳ, ತರಕಾರಿ ಮಾರುಕಟ್ಟೆಗಳಲ್ಲಿ ಸಾಮಾ ಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಹಾಗೂ ಸರ್ಕಾರದ ಆದೇಶಗಳನ್ನು ಪಾಲಿಸದೇ, ಗುಂಪುಗೂಡುತ್ತಿರುವುದು ಕಂಡುಬಂದಿದೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ ಇನ್ನು ಮುಂದೆ ವ್ಯಾಪಾರ ಸ್ಥಳಗಳಿಗೆ ಭೇಟಿ ನೀಡಿ ಗ್ರಾಹಕರು ಮತ್ತು ಅಂಗಡಿ ಮಾಲೀಕರಿಗೆ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಿ, ತಪ್ಪಿದಲ್ಲಿ ಕಾನೂನು ರೀತಿಯ ಕ್ರಮ ವಹಿಸಬೇಕೆಂದೂ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಠಾಣಾ ವ್ಯಾಪ್ತಿ ಯಲ್ಲಿನ ಅಂಗಡಿ, ಮಾಲ್, ಹೋಟೆಲ್ ಮಾಲೀಕರು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವಂತೆ ನಿರ್ದೇಶನ ನೀಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವ ಪ್ರಕಾಶ್‍ಗೌಡರು, ಕೊರೊನಾ ಸೋಂಕು ಸಮು ದಾಯಕ್ಕೆ ಹರಡದಂತೆ ಎಚ್ಚರ ವಹಿಸಬೇಕೆಂದು ತಿಳಿಸಿದ್ದಾರೆ.

ಅನುಸರಿಸಬೇಕಾದ ವಿಧಾನ: ಮದುವೆ ಕಾರ್ಯಕ್ರಮಕ್ಕೆ 50 ಮಂದಿಯನ್ನು ಮಾತ್ರ ಆಹ್ವಾನಿಸುವುದು. ಪೂರ್ವಾನುಮತಿ ಪಡೆಯದೇ ಅಂತಹ ಕಾರ್ಯಕ್ರಮ ಆಯೋಜಿಸಿ ದರೆ ಆಯೋಜಕರು ಹಾಗೂ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗು ವುದು ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ನೀಡಬೇಕು. ಕಡ್ಡಾಯವಾಗಿ ಕಾರ್ಯಕ್ರಮದ ವೀಡಿಯೋಗ್ರಫಿ ಮಾಡಿಸಿ ನಿಗಾ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಇನ್ಸ್‍ಪೆಕ್ಟರ್ ಗಳನ್ನೇ ಜವಾಬ್ದಾರರನÁ್ನಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Translate »