ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮ: ಆತಂಕ ಬೇಡ

ಮಡಿಕೇರಿ,ಮಾ.21-ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಂಡಿದ್ದು, ಯಾವುದೇ ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಭಯ ನೀಡಿದ್ದಾರೆ.

ಮಡಿಕೇರಿ ಜಿಲ್ಲಾಡಳಿತ ಕೈಗೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಶನಿವಾರ ಉನ್ನತಾಧಿಕಾರಿಗಳ ಸಭೆ ನಡೆಸಿದ ಉಸ್ತುವಾರಿ ಸಚಿವರು, ಸೋಂಕು ಹರಡದಂತೆ ತಡೆಯಲು ಸಿದ್ಧರಾಗಿರುವಂತೆ ಸೂಚಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊಡಗಿನಲ್ಲಿ ಕೊರೊನಾ ಸೋಂಕು ಪತ್ತೆಯಾದ ವ್ಯಕ್ತಿ ಸಂಪರ್ಕಿಸಿರಬಹುದಾದ ಇತರರನ್ನೂ ಸಂಪರ್ಕಿಸಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಕೊಡಗಿಗೆ ವಿದೇಶದಿಂದ 242 ಮಂದಿ ವಾಪಾಸ್ಸಾ ಗಿದ್ದು, ಇವರೆಲ್ಲರ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದೆ ಎಂದರು.

ದುಬೈನಿಂದ ಕೊಡಗಿಗೆ ಬಂದ ವ್ಯಕ್ತಿ ಯೋರ್ವ ಬೆಂಗಳೂರಿನಲ್ಲಿ ತನ್ನ ತಂಗಿ ಮನೆಗೆ ತೆರಳಿ ಬಿರಿಯಾನಿ ತಿಂದು ಸಾಕಷ್ಟು ಮಂದಿಯನ್ನು ಸಂಪರ್ಕಿಸಿ ನಂತರ ಕೊಡ ಗಿಗೆ ಬಂದಿದ್ದಾನೆ. ಈತನ ವೈದ್ಯಕೀಯ ಪರೀಕ್ಷಾ ವರದಿ ಇನ್ನಷ್ಟೇ ಲಭಿಸಬೇಕಾಗಿದೆ ಎಂದರು.

ಕೊಡಗಿನ ಗಡಿಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ. ಮಡಿಕೇರಿ ಆಸ್ಪತ್ರೆಯಲ್ಲಿ 8 ಮಂದಿ ಐಸೋ ಲೇಷನ್‍ನಲ್ಲಿದ್ದಾರೆ. 75 ಮನೆಗಳಲ್ಲಿ ಜನರನ್ನು ಸಂಪರ್ಕ ತಡೆ ವ್ಯವಸ್ಥೆಯಲ್ಲಿಡಲಾಗಿದ್ದು, ಅಲ್ಲಿರುವ ಜನರಿಗೆ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದರು.

ಕೊಡಗಿನಲ್ಲಿ ಕೊರೊನಾ ಹಬ್ಬದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ವಹಿಸ ಲಾಗಿದೆ. ಸಣ್ಣ ಲೋಪವೂ ಆಗದಂತೆ ನೋಡಿಕೊಳ್ಳಲಾಗಿದೆ. ಯಾವುದೇ ಕ್ರಮಕ್ಕೂ ಆರ್ಥಿಕ ಮುಗ್ಗಟ್ಟಿಲ್ಲ. ಈ ನಿಟ್ಟಿನಲ್ಲಿ ಮಾನಸಿಕ ಸ್ಥೈರ್ಯ ತುಂಬಿ, ಜನರಲ್ಲಿ ಆತ್ಮವಿಶ್ವಾಸ ಮೂಡಿ ಸುವ ಕಾರ್ಯ ನಡೆಯಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಸುನೀಲ್ ಸುಬ್ರಮಣಿ, ಜಿಪಂ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಟಾಧಿಕಾರಿ ಡಾ. ಸುಮನ್ ಪನ್ನೇಕರ್, ಹೆಚ್ಚುವರಿ ಜಿಲ್ಲಾಧಿ ಕಾರಿ ಡಾ.ಸ್ನೇಹಾ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 278ಜನರ ಮೇಲೆ ನಿಗಾ, ಐವರ ಮೇಲೆ ಶಂಕೆ
ಮಡಿಕೇರಿ,ಮಾ.21-ಕೋವಿಡ್-19ರ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆ ಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದು ವರೆಸಲಾಗಿದೆ. ಅದರಂತೆ ಶನಿವಾರ ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 109 ವಿರಾಜಪೇಟೆಯಲ್ಲಿ 88 ಮತ್ತು ಸೋಮವಾರಪೇಟೆಯಲ್ಲಿ 91 ಜನರನ್ನು ಪತ್ತೆ ಹಚ್ಚಲಾಗಿದೆ.

ಈ ಪೈಕಿ 278 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು (Home Quarantine) ಮಾಡಲಾಗಿದೆ. ಅಲ್ಲದೆ 5 ಜನ ಪ್ರವಾಸಿಗರನ್ನು ರೆಸಾರ್ಟ್/ಹೋಂ ಸ್ಟೇಗಳಲ್ಲಿ ಸಂಪರ್ಕ ತಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 5 ವ್ಯಕ್ತಿಗಳಿಗೆ ಸೋಂಕು ತಗುಲಿರುವ ಶಂಕೆ ಇದ್ದು, ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದ್ದ ಪ್ರಕರಣಗಳ ಪೈಕಿ 1 ಪ್ರಕರಣದಲ್ಲಿ (ವಿರಾಜಪೇಟೆ ತಾಲೂಕಿನ 35 ವಷರ್À ಪ್ರಾಯದ ಪುರುಷÀ ರೊಬ್ಬರಿಗೆ) ಪ್ರಯೋಗಾಲಯ ವರದಿಯಿಂದ ಸೋಂಕು ಇರುವುದು ದೃಢಪಟ್ಟಿರುತ್ತದೆ. ಉಳಿದ 4 ಪ್ರಕರಣಗಳಲ್ಲಿ ಪ್ರಯೋಗಾಲಯ ವರದಿ ನಿರೀಕ್ಷಿಸಲಾಗಿದೆ.