ಹಾಸನ: ರಾಷ್ಟ್ರೀಯ ಮತದಾರರ ದಿನಾಚರಣೆ ಸಿದ್ಧತೆ ಕುರಿತಂತೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷ ರಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಚುನಾವಣಾ ಆಯೋಗದ ಸೂಚನೆಯಂತೆ ಜ.25ರಂದು ರಾಷ್ಟ್ರೀಯ ಮತದಾರರ ದಿನ ಆಚರಿಸಬೇಕಿದೆ. ಅದಕ್ಕಾಗಿ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಹಾಗೂ 12 ಮತಗಟ್ಟೆ ವ್ಯಾಪ್ತಿಯಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸೀಪ್ ಸಮಿತಿ ಅಧ್ಯಕ್ಷರು ಸೂಚನೆ ನೀಡಿದರು.
ಯುವ ಹಾಗೂ ಹೊಸ ಮತದಾರರಿಗೆ ಗುರುತಿಸಿ ಭೇಟಿ ನೀಡುವುದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಪಾತ್ರದ ಬಗ್ಗೆ ಅರಿವು ಮೂಡಿಸುವುದು. ಚುನಾವಣಾ ಆಯೋಗ ಹೊರ ತಂದಿರುವ ಮತದಾರರ ಜಾಗೃತಿ ವೀಡಿಯೋಗಳ ಪ್ರದರ್ಶನ ಮತ್ತಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾ ಪಂಚಾ ಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ಸೂಚಿಸಿದರು. ಎಲ್ಲಾ ತಾಲೂಕುಗಳಲ್ಲೂ ತಹಶೀಲ್ದಾರರ ನೇತೃತ್ವ ದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆಯಾಗಲಿದ್ದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಎಲ್ಲಾ ರೀತಿಯ ನೆರವು ನೀಡಬೇಕು ಎಂದರು. ಮತದಾರರ ಮಹತ್ವದ ಬಗ್ಗೆ ಚುನಾವಣಾ ಪ್ರಕ್ರಿಯೆ ಬಗ್ಗೆ ಶಾಲಾ-ಕಾಲೇಜುಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಮಾಹಿತಿ ನೀಡಬೇಕಿದೆ ಎಂದರು.
ಜ.26ರಂದು ನಡೆಯುವ ಗಣರಾಜ್ಯೋತ್ಸವದ ಮೆರ ವಣಿಗೆಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸ್ತಬ್ದ ಚಿತ್ರಗಳು ಇರಬೇಕು ಎಂದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್, ಜಿಪಂ ಯೋಜನಾ ಕೋಶದ ಯೋಜನಾ ನಿರ್ದೇಶಕ ಅರುಣ್‍ಕುಮಾರ್ ಮತ್ತು ವಿವಿಧ ಇಲಾಖಾ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾ ಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.