ನಾಪೋಕ್ಲುವಿನಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
ಕೊಡಗು

ನಾಪೋಕ್ಲುವಿನಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

October 15, 2018

ನಾಪೋಕ್ಲು: 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾಪೋಕ್ಲುವಿನಲ್ಲಿ ಆಯೋಜಿಸಲು ಉದ್ದೇಶಿಸಿದ್ದು ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ನಾಪೋಕ್ಲು ಸರಕಾರಿ ಪ್ರೌಢಶಾಲೆಯಲ್ಲಿ ಡಿ.22-23ರಂದು ನಡೆಸಲು ಉದ್ಧೇಶಿಸ ಲಾಗಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆದ ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಎಲ್ಲರೊಂದಿಗೆ ಚರ್ಚಿಸಿ ಸರಳ ಕಾರ್ಯಕ್ರಮ ನಡೆಸು ವುದು ಒಳ್ಳೆಯದು ಎಂದರು.

ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಹೋರಾಟ ನಡೆಸಬೇಕಾದ ಅನಿವಾರ್ಯ ಪರಿಸ್ಥಿತಿ ಬಂದೊದಗಿದೆ. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ತನ್ನತನವನ್ನು ಅಲ್ಪ ಮಟ್ಟಿಗಾದರೂ ಉಳಿಸಿಕೊಂಡಿರುವದು ಸಂತಸವಾಗಿದೆ. ನಗರ ಪ್ರದೇಶಗಳಲ್ಲಿ ಕನ್ನಡದ ಮಹತ್ವವನ್ನು ಪರಿಚಯಿಸುವ ಕೆಲಸ ಆರಂಭಿಸ ಬೇಕಾಗಿದೆ. ಕನ್ನಡದ ಬಗೆಗಿನ ಅಭಿ ಮಾನವನ್ನು ಎಲ್ಲರೂ ಶಾಶ್ವತವಾಗಿ ಬೆಳಿಸಿಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದ ಹಿನ್ನಲೆಯಲ್ಲಿ ಸರಳ ಸಮ್ಮೇಳನವನ್ನು ನಡೆಸಲು ಉದ್ಧೇಶಿಸಲಾಗಿದೆ. ಇದು ಅನಿವಾರ್ಯ ಕೂಡ. ಯಾರಲ್ಲಿಯೂ ಇದಕ್ಕಾಗಿ ದೇಣಿಗೆ ಸಂಗ್ರಹಿಸುವುದಿಲ್ಲ. ನಾಪೋಕ್ಲಿನ ಕನ್ನಡಾಭಿಮಾನಿಗಳು ಸಮ್ಮೇಳನಕ್ಕೆ ಆಗಮಿಸುವ ಜನಕ್ಕೆ ಎರಡು ದಿನ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಸಮ್ಮೇ ಳನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದ ಅವರು ಸಮ್ಮೇಳ ನದ ಬಗ್ಗೆ ಸಲಹೆ ಸೂಚನೆ ನೀಡುವವರು 15 ದಿನಗಳ ಮುಂಚಿತವಾಗಿ ಸಂಬಂಧಿ ಸಿದವರಿಗೆ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಾಪೋಕ್ಲು ಹೋಬಳಿ ಕಸಾಪ ಘಟಕದ ಅಧ್ಯಕ್ಷ ಸಿ.ಎಸ್.ಸುರೇಶ್, ಗ್ರಾಮಸ್ಥರಾದ ಅರೆಯಡ ಡಿ. ಸೋಮಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಜಿಪಂ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಮಡಿಕೇರಿ ತಾಲೂಕು ಆರ್‍ಎಂಸಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಮಾತನಾಡಿದರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ಕೆ.ಮನುಮುತ್ತಪ್ಪ ಜಿಲ್ಲಾ ಸಮ್ಮೇಳನ ನಡೆ ಸುವ ಬಗ್ಗೆ ಮಾಹಿತಿ,ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಸಾಪ ಕಾರ್ಯ ದರ್ಶಿ ಕೆ.ಎಸ್.ರಮೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಮೂರ್ನಾಡು ಘಟಕದ ಅಧ್ಯಕ್ಷ ಸುಕು ಮಾರ್, ಜಿಲ್ಲಾ ಕರ್ನಾಟಕ ರಕ್ಷಣಾ ಕಾವಲು ಪಡೆಯ ಅಧ್ಯಕ್ಷ ಕೃಷ್ಣ, ಹಿರಿ ಯರಾದ ಬೊಪ್ಪೇರ ಕಾವೇರಪ್ಪ, ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟಿರ ವಿನಯ್, ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಬೊಪ್ಪಂಡ ಜಾಲಿ ಬೋಪಯ್ಯ, ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಪಿ.ಕೆ.ನಳಿನಿ ಮತ್ತಿತರರು ಇದ್ದರು.

ಪ್ರೌಢಶಾಲಾ ವಿದ್ಯಾರ್ಥಿನಿಯರ ಪ್ರಾರ್ಥ ನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ನಾಪೋಕ್ಲು ಕಸಾಪ ಘಟಕದ ಕಾರ್ಯದರ್ಶಿ ಎನ್.ಕೆ.ಪ್ರಭು ಸ್ವಾಗತಿಸಿ, ಜಿಲ್ಲಾ ಸಮಿತಿ ಸದಸ್ಯೆ ಉಷಾರಾಣಿ ನಿರೂ ಪಿಸಿ, ನಾಪೋಕ್ಲು ಘಟಕದ ಸಹ ಕಾರ್ಯದರ್ಶಿ ಸುಬ್ಬಮ್ಮ ವಂದಿಸಿದರು.

Translate »