ಭರಚುಕ್ಕಿ ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ
ಚಾಮರಾಜನಗರ

ಭರಚುಕ್ಕಿ ಜಲಪಾತೋತ್ಸವ ಪೂರ್ವ ಸಿದ್ಧತೆ ಪರಿಶೀಲನೆ

August 4, 2018

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳ ಭರಚುಕ್ಕಿಯಲ್ಲಿ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ನಿಗದಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಇಂದು ಭರ ಚುಕ್ಕಿಗೆ ಭೇಟಿ ನೀಡಿ ಕೈಗೊಳ್ಳಬೇಕಾಗಿರುವ ಅಗತ್ಯ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.

ವೇದಿಕೆ ಕಾರ್ಯಕ್ರಮ ನಡೆಯುವ ಜಲಪಾತದ ಬಳಿಯ ಸ್ಥಳಕ್ಕೆ ಭೇಟಿ ಕೊಟ್ಟು ವೇದಿಕೆ ನಿರ್ಮಾಣ, ಗಣ್ಯರು, ಆಹ್ವಾನಿತರು, ವೀಕ್ಷಕರು ಕುಳಿತುಕೊಳ್ಳುವ ಆಸನಗಳ ವ್ಯವಸ್ಥೆ ಬಗ್ಗೆ ಕೈಗೊಳ್ಳಬೇಕಿರುವ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ವಿವರಿಸಿದರು.

ಜಲಪಾತಕ್ಕೆ ರಂಗುರಂಗಿನ ಬೆಳಕಿನ ವ್ಯವಸ್ಥೆ, ವೀಕ್ಷಕರು ಸುರಕ್ಷಿತವಾಗಿ ಜಲಪಾತ ವೀಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಲಪಾತೋತ್ಸವದಲ್ಲಿ ಆಹಾರ ಮೇಳ ವನ್ನು ಸಹ ಏರ್ಪಡಿಸಬೇಕಿರುವ ಹಿನ್ನಲೆ ಯಲ್ಲಿ ಕಳೆದ ಜಲಪಾತೋತ್ಸವ ಸಂದರ್ಭದಲ್ಲಿ ನಿಗದಿಯಾಗಿರುವ ಸ್ಥಳಕ್ಕೂ ಭೇಟಿ ನೀಡಿ ವೀಕ್ಷಿಸಿದರು. ಈ ಬಾರಿಯೂ ಹೆಚ್ಚಿನ ಆಹಾರ ಮಳಿಗೆಗಳನ್ನು ತೆರೆಯುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಜಲಪಾತೋತ್ಸವಕ್ಕೆ ಆಗಮಿಸುವ ಜನರ ವಾಹನಗಳ ನಿಲುಗಡೆಗೆ ಗುರುತಿಸಲಾಗಿರುವ ಸ್ಥಳವನ್ನು ವೀಕ್ಷಿಸಿ ದರು. ಕೂಡಲೇ ವಾಹನ ನಿಲುಗಡೆ ಸ್ಥಳವನ್ನು ಸ್ವಚ್ಚಗೊಳಿಸಿ ಅಣಿ ಮಾಡುವ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ನಿರ್ದೇ ಶನ ನೀಡಿದರು.

ಇದಕ್ಕೂ ಮೊದಲು ಭರಚುಕ್ಕಿಯ ಮಯೂರ ಹೋಟೆಲ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಯವರು ಜಲಪಾತೋತ್ಸವ ಸುಗಮ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯಲ್ಲಿರುವ ಅಧಿಕಾರಿಗಳು ನಿಗದಿಪಡಿಸಿರುವ ಕರ್ತವ್ಯವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕೆಂದರು.

ಜಲಪಾತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರು ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಶಿಷ್ಟಾಚಾರ ಅನುಸಾರ ಎಲ್ಲಾ ಸಿದ್ಧತೆಯನ್ನು ಕೈಗೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶವಾಗಬಾರದು. ಸಮಿತಿಯಲ್ಲಿರುವ ಅಧಿಕಾರಿಗಳು ಸಭೆ ನಡೆಸಿ ಮುಂದಿನ ಸಿದ್ಧತಾ ಪರಿಶೀಲನಾ ಸಭೆ ವೇಳೆ ಕೈಗೊಂಡಿರುವ ಪ್ರಗತಿ ಕ್ರಮಗಳ ಕುರಿತು ವಿವರಿಸಬೇಕು ಎಂದು ಕಾವೇರಿಯವರು ತಿಳಿಸಿದರು.

ಮುಖ್ಯವಾಗಿ ಎರಡು ದಿನಗಳ ಕಾಲ ನಡೆಯುವ ಜಲಪಾತೋತ್ಸವ ಸಮಾ ರಂಭದಲ್ಲಿ ಉತ್ತಮ ಸಾಂಸ್ಕøತಿಕ ಕಾರ್ಯ ಕ್ರಮಗಳನ್ನು ಆಯೋಜನೆ ಮಾಡಬೇಕಿದೆ. ಹೀಗಾಗಿ ಸಾಂಸ್ಕೃತಿಕ ಕಲಾ ತಂಡಗಳು, ಕಲಾವಿದರ ಪಟ್ಟಿಯನ್ನು ಅಂತಿಮಗೊಳಿ ಸಬೇಕು ಎಂದು ಡಿಸಿ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯ್ಕೆ ಪ್ರಕ್ರಿಯೆಯನ್ನು ಯಾವುದೇ ಗೊಂದಲವಿಲ್ಲದಂತೆ ನಿರ್ವಹಿಸಬೇಕು. ಕಲಾವಿದರ ಅಸಮಾಧಾನಕ್ಕೆ ಅವಕಾಶವಾಗಬಾರದು. ಒಟ್ಟಾರೆ ಜಲಪಾತೋತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ಯಶಸ್ವಿಗೊಳ್ಳಲು ಅಧಿಕಾರಿಗಳು ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಕಾವೇರಿ ಮಾತನಾಡಿ, ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು, ಕೆಎಸ್ಆರ್‌ಟಿಸಿ ವತಿಯಿಂದ ಭರಚುಕ್ಕಿ ಜಲ ಪಾತೋತ್ಸವಕ್ಕೆ ಹೋಗಿಬರಲು ಹೆಚ್ಚು ಬಸ್ಸುಗಳನ್ನು ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದಲೂ ನಿಯೋಜಿಸಬೇಕೆಂದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಗೀತಾ ಪ್ರಸನ್ನ, ಉಪವಿಭಾಗಾಧಿ ಕಾರಿ ಬಿ.ಫೌಜಿಯಾ ತರುನ್ನುಮ್, ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿ ಧಾಮದ ವಲಯ ಅರಣ್ಯಾಧಿಕಾರಿ ಏಡುಕೊಂಡಲು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ತಹಶೀಲ್ದಾರ್ ಚಂದ್ರಮೌಳಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್ ಇತರರು ಹಾಜರಿದ್ದರು.

Translate »