ಗುಂಡ್ಲುಪೇಟೆ ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ತಯಾರು
ಚಾಮರಾಜನಗರ

ಗುಂಡ್ಲುಪೇಟೆ ಕೆರೆಗಳಿಗೆ ನೀರು ತುಂಬಿಸಲು ನೀಲನಕ್ಷೆ ತಯಾರು

September 3, 2018

ಗುಂಡ್ಲುಪೇಟೆ: ನದಿ ಮೂಲದಿಂದ ನೀರು ತುಂಬಿಸುವ ಮುಂದುವರೆದ ಯೋಜನೆಯಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ತುಂಬಿಸಲು ನೀಲನಕ್ಷೆಯನ್ನು ತಯಾರಿಸಲಾ ಗಿದೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.

ತಾಲೂಕಿನ ಬರಗಿ ಗ್ರಾಮದ ಕೆರೆಯು ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಪತ್ನಿ ಸವಿತಾ, ಪುತ್ರ ಭುವನ್ ಅವರೊಂದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ದರು. ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದಲೂ ಸಾಕಷ್ಟು ಮಳೆ ಬೀಳದೆ ಕೆರೆ ಗಳಿಗೆ ನೀರು ತುಂಬಿರಲಿಲ್ಲ. ಆದರೆ ಈ ಬಾರಿ ಉತ್ತಮ ಮಳೆ ಬೀಳುತ್ತಿದ್ದು, ಕಾಡಂಚಿನ ಕೆರೆಗಳು ತುಂಬಿ ಕೋಡಿಬೀಳುತ್ತಿವೆ. ಬಹಳ ವರ್ಷಗಳ ನಂತರ ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದ್ದು, ಮಳೆಯಾಶ್ರಿತ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರು ತುಂಬಿಸುವ ಯೋಜನೆಯ ನೀಲನಕ್ಷೆಯನ್ನು ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಹುತ್ತೂರಿನಿಂದ ವಡ್ಡಗೆರೆ ಕೆರೆಗೆ ನೀರು ಹರಿಸುವ ಯೋಜನೆಯ ಕಾಮಗಾರಿ ಪ್ರಗತಿ ಯಲ್ಲಿದ್ದು, ಕೆಲವೇ ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಉಳಿದ ಕೆರೆಗಳಿಗೂ ನೀರು ಹರಿಸಲು ಯೋಜನೆ ರೂಪಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಕುಮಾರ್, ಬಿಜೆಪಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್ ಸೇರಿದಂತೆ ಹಲವರು ಇದ್ದರು.

Translate »