ಹಾಸನ: ಬಜೆಟ್ ರೈತ ಪರವಾಗಿರಲಿದೆ. ರೈತರ ಸಾಲ ಮನ್ನಾ ಯೋಜನೆಗೆ ಬಜೆಟ್‍ನಲ್ಲಿ 24,000 ಕೋಟಿ ರೂ. ಅನುದಾನ ಮೀಸಲಿ ರಿಸುವ ನಿರೀಕ್ಷೆ ಇದೆ ಎಂದು ಸಣ್ಣ ಕೈಗಾರಿಕೆ ಸಚಿವರಾದ ಗುಬ್ಬಿ ಶ್ರೀನಿವಾಸ್ ಹೇಳಿದರು.
ನಗರದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ, ಬರನಿರ್ವಹಣೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸಂಪುಟ ಉಪಸಮಿತಿಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಿದೆ. ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಹಾಸನ ಸೇರಿದಂತೆ ರಾಜ್ಯದ 74 ತಾಲೂಕುಗಳಲ್ಲಿ ತೆಂಗು ಬೆಳೆ ಇದ್ದು ಇದರ ಅಭಿವೃದ್ಧಿಗೆ ಕಲ್ಪತರು ಕಾಯಕಲ್ಪ ಯೋಜನೆಯನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಿ ದ್ದೇವೆ. ಕೇರಳದಲ್ಲಿ ಈಗಾಗಲೇ ಈ ಯೋಜನೆ ಅತ್ಯಂತ ಯಶಸ್ವಿಯಾಗಿದ್ದು ರಾಜ್ಯದಲ್ಲಿಯೂ ತೆಂಗು ನಾರು ಉತ್ಪನ್ನ ಅಭಿವೃದ್ಧಿಗೆ ಚಿಂತಿಸಲಾಗಿದೆ. ಇದರಿಂದ ತೆಂಗು ಬೆಳೆಗಾರರಿಗೆ ಅನುಕೂಲವಾಗ ಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರು ಹೆಚ್ಚಿನ ಆದ್ಯತೆ ನೀಡಿದ್ದು ಈ ಯೋಜನೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೈಗಾರಿಕೆ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಅವಕಾಶ ನೀಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಕೈಗಾರಿಕೆ ತೆರೆಯಲಾಗಿರುವುದು ಈ ಬಗ್ಗೆ ಇಲಾಖೆ ಅಧಿಕಾರಿ ಗಳೊಂದಿಗೆ ಚರ್ಚಿಸಿ ಗಮನ ಹರಿಸಲಾಗುವುದು ಎಂದರು.