ಜು.1ರಂದು ವೈದ್ಯ ಭಾಸ್ಕರ ಪ್ರಶಸ್ತಿ ಪ್ರದಾನ
ಮೈಸೂರು

ಜು.1ರಂದು ವೈದ್ಯ ಭಾಸ್ಕರ ಪ್ರಶಸ್ತಿ ಪ್ರದಾನ

June 24, 2018

ಮೈಸೂರು: ಆಯುರ್ವೇದ ಪ್ರಚಾರ ಪರಿಷತ್ ಟ್ರಸ್ಟ್ ವತಿಯಿಂದ ವಿಶ್ವ ವೈದ್ಯ ದಿನಾಚರಣೆಯ ಅಂಗವಾಗಿ ವೈದ್ಯ ಭಾಸ್ಕರ ಪ್ರಶಸ್ತಿ ಪ್ರದಾನ ಸಮಾ ರಂಭವನ್ನು ಏರ್ಪಡಿಸಲಾಗಿದೆ. ಜುಲೈ 1ರಂದು ಬೆಳಿಗ್ಗೆ 10.15ಕ್ಕೆ ದಿ ಇನ್‍ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ಖ್ಯಾತರಾಗಿರುವ ಐವರು ವೈದ್ಯರುಗಳಿಗೆ ವೈದ್ಯ ಭಾಸ್ಕರ ಪ್ರಶಸ್ತಿಯನ್ನು ಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪಿ.ವೆಂಕಟರಾಮಯ್ಯ ಪ್ರದಾನ ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಶ್ರಾಂತ ನಿರ್ದೇಶಕ ಡಾ. ತಿಮ್ಮಯ್ಯ ಡಾ. ಬಿಸಿ.ರಾಯ್ ಅವರ ಭಾವಚಿತ್ರವನ್ನು ಅನಾವರಣ ಮಾಡ ಲಿದ್ದು, ಮೈಸೂರು ವಿವಿ ಮಾಜಿ ಸಿಂಡಿಕೇಟ್ ಮಾಜಿ ಸದಸ್ಯ ಹೆಚ್.ಎ. ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಧ್ಯಾ ಸುರಕ್ಷಾ ಟ್ರಸ್ಟ್ ಅಧ್ಯಕ್ಷ ಬಿ.ಆರ್.ನಟರಾಜ ಜೋಯಿಸ್, ಪಿ.ಶಾಂತರಾಜೇ ಅರಸ್ ಹಾಗೂ ಕೌಸ್ತುಭ ಪತ್ರಿಕೆ ಸಂಪಾದಕಿ ರತ್ನಾ ಹಾಲಪ್ಪಗೌಡ ಭಾಗವಹಿಸಲಿದ್ದಾರೆ.

Translate »