ಎರಡು ದಿನಗಳ ಕಾರ್ಯಕ್ರಮಕ್ಕೆ ಇಂದು ಮೈಸೂರಿಗೆ ರಾಷ್ಟ್ರಪತಿ
ಮೈಸೂರು

ಎರಡು ದಿನಗಳ ಕಾರ್ಯಕ್ರಮಕ್ಕೆ ಇಂದು ಮೈಸೂರಿಗೆ ರಾಷ್ಟ್ರಪತಿ

October 10, 2019

ಮೈಸೂರು, ಅ. 9(ಆರ್‍ಕೆ)- ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ (ಅ. 10) ಮೈಸೂರಿಗೆ ಆಗಮಿಸುವರು.

ಗುರುವಾರ ಸಂಜೆ 5.25ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡು, ಕಾರಿನಲ್ಲಿ ನಜರ್‍ಬಾದಿನ ಸರ್ಕಾರಿ ಅತಿಥಿ ಗೃಹಕ್ಕೆ ಕರೆತರಲಾಗುವುದು.

ಎರಡು ಗಂಟೆ ವಿಶ್ರಾಂತಿ ಬಳಿಕ ರಾತ್ರಿ 7.30 ಗಂಟೆಗೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಜಯ ಚಾಮರಾಜ ಒಡೆಯರ್ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಸರ್ಕಾರಿ ಅತಿಥಿಗೃಹದಲ್ಲಿ ರಾತ್ರಿ ವಾಸ್ತವ್ಯ ಹೂಡುವರು.

ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಂಜನಗೂಡಿಗೆ ತೆರಳಿ ಶ್ರೀ ನಂಜುಂಡೇ ಶ್ವರನ ದರ್ಶನ, ಪೂಜೆ ಸಲ್ಲಿಸಿದ ನಂತರ ಬೆಳಿಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆಯ ಲಿರುವ ರಾಷ್ಟ್ರಪತಿಗಳು, ಮರಳಿ ಸರ್ಕಾರಿ ಅತಿಥಿ ಗೃಹಕ್ಕೆ ಬಂದು ವಿಶ್ರಾಂತಿ ಪಡೆಯುವರು.

ಮಧ್ಯಾಹ್ನ 4 ಗಂಟೆಗೆ ಮೈಸೂರು ತಾಲೂಕು, ವರುಣಾ ಗ್ರಾಮದ ಬಳಿ ಜೆಎಸ್‍ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಅಂಡ್ ರೀಸರ್ಚ್ ಸಂಸ್ಥೆ ವತಿಯಿಂದ ನಿರ್ಮಿಸಲುದ್ದೇಶಿರುವ ಗ್ಲೋಬಲ್ ಕ್ಯಾಂಪಸ್ ಯೋಜನೆಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿ ಸುವರು. ಬಳಿಕ ಅಲ್ಲಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಂಜೆ 5.35ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸು ವರು ಎಂದು ರಾಷ್ಟ್ರಪತಿಗಳ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣ, ಸರ್ಕಾರಿ ಅತಿಥಿಗೃಹ, ಮೈಸೂರು ಅರಮನೆ, ಚಾಮುಂಡಿಬೆಟ್ಟ, ನಂಜನಗೂಡು ನಂಜುಂಡೇಶ್ವರ ದೇವಸ್ಥಾನ ಹಾಗೂ ವರುಣ ಗ್ರಾಮದ ಬಳಿ, ಮೈಸೂರು ನಗರ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಭಾರೀ ಬಂದೋಬಸ್ತ್‍ನೊಂದಿಗೆ ಕಟ್ಟೆಚ್ಚರ ವಹಿಸಲು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರಪತಿಗಳು ಸಾಗುವ ಮಾರ್ಗದ ರಸ್ತೆಗಳ ಗುಂಡಿ ಮುಚ್ಚಿ, ಹಂಪ್ಸ್‍ಗಳನ್ನು ತೆಗೆದು ಹಾಕಲಾಗಿದೆಯಲ್ಲದೆ, ಇಕ್ಕೆಲಗಳ ಗಿಡಗಂಟಿ ತೆಗೆದು ಸ್ವಚ್ಛಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ನೇತೃತ್ವದಲ್ಲಿ ಜಿಲ್ಲಾಡಳಿತ, ಮುಡಾ, ನಗರ ಪಾಲಿಕೆ, ಜಿಲ್ಲಾ ಪಂಚಾಯ್ತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.

ಶ್ರೀಕಂಠೇಶ್ವರ ದೇವಾಲಯ, ಚಾ.ಬೆಟ್ಟಕ್ಕೆ ನಾಳೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು, ಅ.9- ಭಾರತದ ರಾಷ್ಟ್ರಪತಿಗಳಾದ ರಾಮನಾಥ ಕೋವಿಂದ್ ಅವರು ಅ.11 ರಂದು ಬೆಳಿಗ್ಗೆ 8.30 ಗಂಟೆಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡುವುದರಿಂದ ಅಂದು ಬೆಳಿಗ್ಗೆ 8.30ರಿಂದ 10.30ರವರೆಗೆ ಸಾರ್ವಜನಿಕ ರಿಗೆ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಶ್ರೀಕಂಠೇಶ್ವರ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ. ಅಂದು ಬೆಳಿಗ್ಗೆ ಚಾಮುಂಡಿಬೆಟ್ಟದ ದೇವಾ ಲಯಕ್ಕೂ ರಾಷ್ಟ್ರಪತಿಗಳು ಭೇಟಿ ನೀಡಲಿರುವು ದರಿಂದ ಬೆಳಿಗ್ಗೆ 9.45ರಿಂದ 11.45 ರವರೆಗೆ ದೇವಾ ಲಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

Translate »