ಮೋದಿ ತಾಯಿ ಭೇಟಿಯಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮೈಸೂರು

ಮೋದಿ ತಾಯಿ ಭೇಟಿಯಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್

October 14, 2019

ಗುಜರಾತ್: ಇತ್ತೀಚೆಗಷ್ಟೇ ಮೈಸೂರಿಗೆ ಭೇಟಿ ನೀಡಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಗುಜರಾತ್‍ನ ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹಿರಾ ಬೆನ್‍ರನ್ನ ಭೇಟಿಯಾಗಿದ್ದಾರೆ. ಎರಡು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಂಡಿರುವ ಅವರು, ಇಂದು ಗಾಂಧಿನಗರದಲ್ಲಿ ಹಿರಾ ಬೆನ್‍ರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಈ ವಿಚಾರವನ್ನು ಕೋವಿಂದ್ ತಮ್ಮ ಟ್ವಿಟರ್ ಅಕೌಂಟ್‍ನಲ್ಲಿ ಹಂಚಿಕೊಂಡಿದ್ದಾರೆ. ಕೋವಿಂದ್ ಗುಜರಾತ್ ಪ್ರವಾಸಕ್ಕೆ ಅವರ ಧರ್ಮಪತ್ನಿ ಸವಿತಾ ಕೂಡಾ ಸಾಥ್ ನೀಡಿದ್ದಾರೆ. ಮೊನ್ನೆಯಷ್ಟೇ ಕೋವಿಂದ್, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು. ಹಾಗೇ ನಿನ್ನೆ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್‍ಕುಮಾರ್ ಅವರ ಪತ್ನಿ, ತೇಜಸ್ವಿನಿ ಅನಂತ್‍ಕುಮಾರ್ ಅವರನ್ನ ಭೇಟಿಯಾಗಿದ್ದರು.

Translate »