ರಾಜ್ಯದ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ
ಮೈಸೂರು

ರಾಜ್ಯದ ಎಸ್ಸಿ, ಎಸ್ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

June 16, 2018

ಬೆಂಗಳೂರು: ಕರ್ನಾ ಟಕ ಸರಕಾರದ ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿ ರುವುದಾಗಿ ವರದಿಯಾಗಿದೆ. ಮುಂಬಡ್ತಿ ಪಡೆದಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ ಸರಕಾರಿ ಅಧಿಕಾರಿಗಳಿಗೆ ಇದು ಅತ್ಯಂತ ಸಿಹಿ ಸುದ್ದಿಯಾಗಿದೆ.

2017ರ ಡಿಸೆಂಬರ್ 16ರಂದು ರಾಜ್ಯ ಸರಕಾರ ರಾಷ್ಟ್ರಪತಿಯವರಿಗೆ ಎಸ್‍ಸಿ/ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ವಿಧೇಯಕವನ್ನು ಕಳುಹಿಸಿಕೊಟ್ಟಿತ್ತು. ಈ ವಿಧೇಯಕವನ್ನು ಅಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರಕಾರ ಉಭಯ ಸದನಗಳಲ್ಲಿ ಅಂಗೀಕರಿ ಸಿತ್ತು. ಇದೀಗ ಅದಕ್ಕೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಈ ಕುರಿತು ಪತ್ರಿಕಾ ಪ್ರಕ ಟಣೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು, ಪರಿ ಶಿಷ್ಟ ಜಾತಿ ಮತ್ತು ಪಂಗಡಗಳ ನೌಕರ ರಿಗೆ ಸಹಾಯವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರ ಕ್ರಮ ವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ಇದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಲ್ಲಿದ್ದ ಆತಂಕ ದೂರವಾಗಿದೆ ಎಂದು ಅವರು ತಿಳಿಸಿದ್ದಾರೆ.

Translate »