ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ಹೆಚ್‍ಡಿಕೆ
ಹಾಸನ

ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ಹೆಚ್‍ಡಿಕೆ

February 19, 2019

ಹಾಸನ: ಸರ್ಕಾರ ರೈತರ ಹಿತ ದೃಷ್ಟಿಯನ್ನಷ್ಟೇ ಇಟ್ಟುಕೊಂಡಿಲ್ಲ, ಯುವ ಜನರಿಗೆ ಉದ್ಯೋಗ ಸೃಷ್ಟಿಸಿಕೊಡುವ ಕಾರ್ಯ ದಲ್ಲಿಯೂ ಮಗ್ನವಾಗಿದೆ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಡಳಿತ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ಜಂಟಿಯಾಗಿ ಆಯೋಜಿಸಿದ್ದ ರೈತರಿಗೆ ಸಾಲ ತೀರುವಳಿ ಪತ್ರ ವಿತರಣೆ ಸಮಾರಂಭದಲ್ಲಿ ಸೋಮವಾರ ಮಾತನಾಡಿದ ಅವರು, ರೈತರ ಸಾಲಮನ್ನಾ ಯೋಜನೆಯನ್ನು ಎರಡೇ ಕಂತುಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ವೇಳೆ, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಉದ್ದೇಶದಿಂದ 9 ಜಿಲ್ಲೆಗಳಲ್ಲಿ ಹೊಸ ಕಾರ್ಖಾನೆಗಳ ಸ್ಥಾಪನೆಗೂ ಸರ್ಕಾರ ಆದ್ಯತೆ ನೀಡಿದೆ. ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ ಸೇರಿದಂತೆ 9 ಜಿಲ್ಲೆಗಳಲ್ಲಿ ಕಾರ್ಖಾನೆ ಗಳಿಗೆ ಚಾಲನೆ ನೀಡಿದ್ದೇವೆ. ಕೊಪ್ಪಳ ಜಿಲ್ಲೆಯಲ್ಲಿ ಹಾಂಗ್‍ಕಾಂಗ್ ಮಾದರಿ ಕೈಗಾ ರಿಕಾ ಕ್ಲಸ್ಟರ್ ಉದ್ಘಾಟಿಸಲಾಗಿದೆ. ಅಲ್ಲಿ 10 ಸಾವಿರ ಮಂದಿಗೆ ಉದ್ಯೋಗವನ್ನು ಸೃಷ್ಟಿಸ ಲಾಗಿದೆ. ಬಳ್ಳಾರಿಯಲ್ಲಿ 25-30 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿಸಲು ಹಲವು ವಸ್ತ್ರೋದ್ಯಮ ಕಾರ್ಖಾನೆಗಳಿಗೆ ಚಾಲನೆ ನೀಡಲಾಗಿದೆ ಎಂದು ವಿವರಿಸಿದರು.

ವಿಮಾನ ನಿಲ್ದಾಣ: ರೈತರ ಉತ್ಪನ್ನ ಗಳನ್ನು ವಿದೇಶಕ್ಕೆ ರಫ್ತು ಮಾಡಬೇಕು ಎಂಬ ಉದ್ದೇಶದಿಂದ ಹಾಸನ ಜಿಲ್ಲೆ ಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇಗೌಡರು ಪ್ರಯತ್ನಿಸಿದ್ದಾರೆ. ಅದನ್ನು ಈಡೇರಿಸಲು ನಿರ್ಧಾರ ಕೈಗೊಂ ಡಿದ್ದೇವೆ. ಜಿಲ್ಲೆಯಲ್ಲಿ ಪ್ರವಾಸ ಕ್ಷೇತ್ರಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬೇಕಿದೆ. ಜಿಲ್ಲೆಯ ಅಭಿವೃದ್ಧಿ ಮಾಜಿ ಪ್ರಧಾನಿ ದೇವೇಗೌಡರ ಕನಸು. ಜಿಲ್ಲಾ ಉಸ್ತುವಾರಿ ಸಚಿವರು ಈ ನಿಟ್ಟಿ ನಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಜಿಲ್ಲೆ ಯಲ್ಲಿ ಪ್ರತಿಷ್ಠಿತ ಐಐಟಿ ಶಿಕ್ಷಣ ಸಂಸ್ಥೆ ಆರಂಭಿಸಬೇಕೆಂಬುದು ದೇವೇಗೌಡರ ಕನಸ್ಸಾಗಿತ್ತು. ಅದು ಸಾಧ್ಯವಾಗದ ಕಾರಣ ಅದಕ್ಕೆ ಸರಿಸಮನಾದ ಶಿಕ್ಷಣ ಸಂಸ್ಥೆ ಯನ್ನು ಜಿಲ್ಲೆಗೆ ತರಲು ಕ್ರಮ ವಹಿಸ ಲಾಗಿದೆ ಎಂದು ವಿವರಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಾತನಾಡಿ, ನಾಡಿನ ಬೆನ್ನೆಲು ಬಾದ ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸಹಕಾರ ಬ್ಯಾಂಕ್ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ರೈತರು ಮಾಡಿದ್ದ 46000 ಕೋಟಿ ಸಾಲ ಮನ್ನಾ ಮಾಡಲಾಗಿದೆ ಎಂದು ಸರ್ಕಾರದ ರೈತಪರ ಕಾಳಜಿಗೆ ಮೆಚ್ಚುಗೆ ಸೂಚಿಸಿದರು.

ಜಿಲ್ಲೆಯಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ವಿವರಿಸಿದರು. ಫೆ.23-24ರಂದು ನಗರದಲ್ಲಿ ಉದ್ಯೋಗ ವೇಳ ಆಯೋಜಿ ಸಲಾಗಿದೆ ಎಂದ ಸಚಿವರು, ಹೊಸ ಯೋಜನೆ ಗಳು ಹಾಗೂ ರಾಜ್ಯ ಸರ್ಕಾರದ ಆದ್ಯತೆಗಳ ಬಗ್ಗೆ ತಿಳಿಸಿದರು.

ಸಹಕಾರ ಸಚಿವ ಬಂಡೆಪ್ಪ ಕಾಶಂ ಪುರ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಐಜಿಪಿ ಶರತ್‍ಚಂದ್ರ, ಜಿಪಂ ಅಧ್ಯಕ್ಷೆ ಶ್ವೇತಾ, ಮುಖ್ಯಮಂತ್ರಿಗಳ ಸಂಸ ದೀಯ ಕಾರ್ಯದರ್ಶಿಯಾದ ಶಾಸಕ ಎಂ.ಎ. ಗೋಪಾಲಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಹೆಚ್.ಕೆ.ಕುಮಾರ ಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಜಿಲ್ಲಾಧಿ ಕಾರಿ ರೋಹಿಣಿ ಸಿಂಧೂರಿ, ಎಸ್‍ಪಿ ಎ.ಎನ್.ಪ್ರಕಾಶ್ ಗೌಡ, ಜಿಪಂ ಸಿಇಒ ಪುಟ್ಟಸ್ವಾಮಿ, ಎಡಿಸಿ ವೈಶಾಲಿ, ಡಿಸಿಸಿ ಬ್ಯಾಂಕ್ ಎಂಡಿ ಲೋಕೇಶ್, ವಿವಿಧ ಇಲಾಖೆಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಉದ್ಯೋಗ ಮೇಳ: ಫೆ.23, 24ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಪ್ರಚಾರ ಫಲಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಮೈತ್ರಿಯ ನಡಿಗೆ ಅಭಿವದ್ಧಿಯ ಕಡೆಗೆ ಎಂಬ ಜಿಲ್ಲಾ ಪ್ರಗತಿ ನೋಟ ಪುಸ್ತಕವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು.

ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಶುಮೇಳದಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 50 ಸಾವಿರ ರೂ., ದ್ವಿತೀಯ ಸ್ಥಾನ 30 ಸಾವಿರ ರೂ., ತೃತೀಯ ಸ್ಥಾನ 20 ಸಾವಿರ ರೂ ಬಹುಮಾನದ ಚೆಕ್ ವಿತರಿಸಲಾಯಿತು.
ಸಮಾರಂಭಕ್ಕೂ ಮುನ್ನಾ ಖ್ಯಾತ ಸ್ಯಾಂಡಲ್ ವುಡ್ ಗಾಯಕಿ ಶಮಿತಾ ಮಲ್ನಾಡ್ ಮತ್ತು ತಂಡದವರಿಂದ 3 ಗಂಟೆಗಳ ಸಂಗೀತ ಕಾರ್ಯಕ್ರಮ ನಡೆಯಿತು. ಕೇಳುಗರು ಚಪ್ಪಾಳೆ ತಟ್ಟಿ ಹಾಡುಗಳನ್ನು ಆನಂದಿಸಿದರು.

Translate »