ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ 10 ದಿನ ಮುಂದೂಡಿಕೆ
ಮೈಸೂರು

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ 10 ದಿನ ಮುಂದೂಡಿಕೆ

July 10, 2019

ಮೈಸೂರು,ಜು.9(ಎಸ್‍ಪಿಎನ್)-ಗೊಂದಲ ಗೂಡಾಗಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು 10 ದಿನ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು `ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆಯುಕ್ತರ ನೇತೃತ್ವದಲ್ಲಿ ನಡೆದ ರಾಜ್ಯದ ಎಲ್ಲಾ ಡಿಡಿಪಿಐ ಸಭೆಯಲ್ಲಿ ಈ ತೀರ್ಮಾನವಾಗಿದ್ದು, ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಕೊಂಡು, 10 ದಿನಗಳ ನಂತರ ಎಲ್ಲಾ ವರ್ಗಾವಣೆ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಆಯುಕ್ತರು ಸೂಚಿಸಿದ್ದಾರೆ. ಎನ್ನಲಾಗಿದೆ. ಶಿಕ್ಷಕರ ಸೇವಾ ದತ್ತಾಂಶ ಕ್ರೋಢೀಕರಣ (ಟಿಡಿಎಸ್) ಹಾಗೂ ಪತಿ-ಪತ್ನಿ ಪ್ರಕರಣದ ವರ್ಗಾವಣೆ ಪ್ರಕ್ರಿಯೆಯಲ್ಲಿರುವÀ ಗೊಂದಲ ಗಳನ್ನು ಸರಿಪಡಿಸಿಕೊಂಡು 10 ದಿನಗಳ ನಂತರ ವರ್ಗಾವಣೆ ಆರಂಭಿಸುವಂತೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಆದರೆ, ಈ ಸಂಬಂಧ ಇನ್ನೂ ಅಧಿಕೃತ ಆದೇಶ ಹೊರಬಿದ್ದಿಲ್ಲ.

Translate »