ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪಟ್ಟಿ ಪ್ರಕಟ
ಮೈಸೂರು

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪಟ್ಟಿ ಪ್ರಕಟ

September 23, 2018

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ 2017-18ನೇ ಸಾಲಿನ ಮೈಸೂರು ವಿಭಾಗದೊಳಗಿನ ಅಂತರ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ ವೃಂದದ ಘಟಕದೊಳಗಿನ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದ ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಇಲಾಖೆಯ ವೈಬ್‍ಸೈಟ್ (www. schooleducation. kar.nic.in) ನಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಸದರಿ ವರ್ಗಾವಣೆ ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕ ವೃಂದವರು ಆಕ್ಷೇಪಣೆಗೆ ಸಂಬಂಧಿಸಿ ದಂತೆ ಅಗತ್ಯ ದಾಖಲೆಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೇರವಾಗಿ 2018ರ ಸೆ.25ರೊಳಗೆ ಆಕ್ಷೇಪಣೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಭಾಗೀಯ ಕಾರ್ಯದರ್ಶಿ ಜಿ.ಎಸ್.ಪ್ರಭುಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »