ಬೆಂಗಳೂರು-ಮೈಸೂರು ಹೆದ್ದಾರಿ ಮುಳುಗಡೆ ಬಗ್ಗೆ ಪ್ರಧಾನಿ ಕಳವಳ
News

ಬೆಂಗಳೂರು-ಮೈಸೂರು ಹೆದ್ದಾರಿ ಮುಳುಗಡೆ ಬಗ್ಗೆ ಪ್ರಧಾನಿ ಕಳವಳ

September 9, 2022

ಬೆಂಗಳೂರು, ಸೆ.8(ಕೆಎಂಶಿ)-ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಲೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಕಳವಳ ವ್ಯಕ್ತಪಡಿಸಿದ್ದಾರಂತೆ.

ಈ ವಿಷಯವನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದಲ್ಲಿ ನಡೆದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಸ್ತೆಯ ಬಗ್ಗೆ ಪ್ರಧಾನಿಯವರ ಆಸಕ್ತಿಯ ಮಾಹಿತಿ ನೀಡಿದ್ದಲ್ಲದೆ, ಅಲ್ಲಿಯೇ ಪಕ್ಕದಲ್ಲಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ತಕ್ಷಣವೇ ಎಂತಹ ಮಳೆ ಮತ್ತು ನೆರೆ ಬಂದರೂ ಸಾರ್ವ ಜನಿಕರಿಗೆ ತೊಂದರೆಯಾಗದಂತೆ ನೀರು ಸರಾಗವಾಗಿ ಹರಿದು ಹೋಗುವಂತೆ ರಸ್ತೆ ಪುನರ್ ವಿನ್ಯಾಸ ಮಾಡಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಕೇಂದ್ರ ಸಚಿವರು ಆದೇಶಿಸಿದ್ದಾರೆ. ಪ್ರಧಾನಿಯವರೇ ಖುದ್ದು ನನ್ನ ಬಳಿ ರಸ್ತೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರೆ, ರಾಷ್ಟ್ರ ಮಟ್ಟದಲ್ಲಿ ಇದು ಯಾವ ರೀತಿ ನಮ್ಮನ್ನು ಮುಜುಗರಕ್ಕೆ ಸಿಲುಕಿಸಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಲ್ಲದೆ, ಯಾವುದೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುವ ಸಂದರ್ಭದಲ್ಲೂ ಇಂತಹ ಲೋಪವಾಗ ದಂತೆ ನೋಡಿಕೊಳ್ಳಬೇಕು. ರಸ್ತೆಯ ಬಗ್ಗೆ ಮುಖ್ಯಮಂತ್ರಿಯ ವರಿಂದ ಮಾಹಿತಿ ಪಡೆದ ಗಡ್ಕರಿ ಅವರು, ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ಅಗತ್ಯವಾದ ಭೂ ಸ್ವಾಧೀನ ಮಾಡಿಕೊಳ್ಳಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತೆ ಹೊಸದಾಗಿ ಪುನರ್ ವಿನ್ಯಾಸ ಮಾಡಿ ಎಂದು ಸೂಚಿಸಿದ್ದಾರೆ.
ಈ ರಸ್ತೆಯನ್ನು ದಸರಾಗೆ ರಾಷ್ಟ್ರಕ್ಕೆ ಸಮರ್ಪಣೆ ಮಾಡು ವುದಾಗಿ ನಾನು ಮಾತು ಕೊಟ್ಟಿದ್ದೆ, ಆದರೆ ವಿಳಂಬವಾಗುತ್ತಿರು ವುದು ಏತಕ್ಕೆ ಎಂದು ಅಧಿಕಾರಿಗಳ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೈಸೂರು ದಸರಾ ವೇಳೆಗೆ ಗೊಂದಲಗಳನ್ನು ಪರಿಹರಿಸಿ, ರಸ್ತೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿದ್ದ ಭಾರೀ ಮಳೆ ಅದರಲ್ಲೂ ಬೆಂಗ ಳೂರು ನಗರದ ಕೆಲವು ಭಾಗ ಮತ್ತು ಹೆದ್ದಾರಿ ನಿರ್ಮಾಣ ದಲ್ಲಾಗಿರುವ ಲೋಪದ ಬಗ್ಗೆ ಇಡೀ ರಾಷ್ಟ್ರದಲ್ಲಿ ಚರ್ಚೆಗೆ ಗ್ರಾಸ ವಾಗಿ, ನಮ್ಮನ್ನು ಮುಜುಗರಕ್ಕೆ ಸಿಲುಕಿಸಿದೆ ಎಂದು ತಿಳಿಸಿದ್ದಾರೆ. ಸಣ್ಣಪುಟ್ಟ ವಿಷಯಗಳು ಎಷ್ಟು ದೊಡ್ಡದಾಗುತ್ತವೆ ಎಂಬುದಕ್ಕೆ ಇದೇ ಸಾಕ್ಷಿ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಗಡ್ಕರಿ ಎಚ್ಚರಿಸಿದ್ದಾರೆ. ಬೆಂಗಳೂರು ನಗರದಲ್ಲಿ ಮಳೆಯಿಂದಾ ಗಿರುವ ಅನಾಹುತಗಳ ಬಗ್ಗೆ ಇಡೀ ವಿಶ್ವಮಟ್ಟದಲ್ಲೇ ಚರ್ಚೆಯಾಗುತ್ತಿದೆ. ಈ ನಗರಕ್ಕೆ ತನ್ನದೇ ಆದ ವರ್ಚಸ್ಸು ಇದೆ. ಅದಕ್ಕೆ ಕುಂದು ತರದಂತೆ ನೋಡಿಕೊಳ್ಳಿ ಎಂದು ಪ್ರಧಾನಿ ಯವರು ನನಗೆ ಹೇಳಿದ್ದಾರೆ. ಐಟಿ ಕಾರಿಡಾರ್‍ನಲ್ಲೇ ಮಳೆಯಿಂದ ದೊಡ್ಡ ಅನಾಹುತವಾಗಿದೆ. ಮುಂದೆ ಇಂತಹ ಸಮಸ್ಯೆಗಳು ಉದ್ಭವವಾಗದಂತೆ ನೋಡಿಕೊಳ್ಳಲು ಕೇಂದ್ರ ಭೂ ಸಾರಿಗೆಯಿಂದ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ. ಕಾರಿಡಾರ್ ಪಕ್ಕದಲ್ಲೇ ಚೆನ್ನೈ ರಾಷ್ಟ್ರೀಯ ಹೆದ್ದಾರಿಯು ಹೋಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ಮಳೆ ನೀರು ಸರಾಗವಾಗಿ ಹರಿದು ಹೋಗಲು ಮತ್ತು ಸುಗಮ ಸಂಚಾರಕ್ಕೆ ಏನೆಲ್ಲಾ ವ್ಯವಸ್ಥೆ ಬೇಕು ಅದನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

Translate »