ನವದೆಹಲಿ, ಫೆ.5-ಅಯೋಧ್ಯಾ ರಾಮಜನ್ಮ ಭೂಮಿ -ಬಾಬ್ರಿ ಮಸೀದಿ ಭೂ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿ ತಿಂಗಳುಗಳೇ ಕಳೆದಿವೆ.
ವಿವಾದಿತ ಜಾಗದಲ್ಲಿ ಹಿಂದೂಗಳು ರಾಮ ಮಂದಿರ ಕಟ್ಟಬೇಕು, ಮಸೀದಿ ಕಟ್ಟಲು ಅಯೋಧ್ಯೆ ಯಲ್ಲಿಯೇ ಬೇರೆ ಕಡೆಯಲ್ಲಿ ಮುಸ್ಲಿಮರಿಗೆ 5 ಎಕರೆ ಜಾಗ ನೀಡಬೇಕು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು. ಆ ಜವಾಬ್ದಾರಿಯನ್ನು ಕೇಂದ್ರ ಸರ್ಕಾರಕ್ಕೆ ವಹಿಸಿತ್ತು. ಅಲ್ಲದೆ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚಿಸಬೇಕು ಎಂದೂ ಸೂಚನೆ ನೀಡಿತ್ತು. ಅದ ರಂತೆ ಕೇಂದ್ರ ಸರ್ಕಾರ ರಾಮಮಂದಿರ ನಿರ್ಮಾಣ ಕ್ಕಾಗಿ ಟ್ರಸ್ಟ್ ರಚಿಸಿದೆ ಎಂದು ಬುಧವಾರ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯೋಜನೆ ರೂಪಿಸಿದ್ದೇವೆ. `ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ’ ಹೆಸರಿನ ಟ್ರಸ್ಟ್ ರಚನೆ ಮಾಡಲಾಗಿದೆ. ಕೇಂದ್ರ ಸರ್ಕಾರ ಟ್ರಸ್ಟ್‍ಗೆ 67.703 ಎಕರೆ ಭೂಮಿ ನೀಡಲು ನಿರ್ಧರಿಸಿತು. ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟ ಎಲ್ಲ ನಿರ್ಧಾರ ಗಳನ್ನೂ ತೆಗೆದುಕೊಳ್ಳುವ ಅಧಿಕಾರ ಈ ಟ್ರಸ್ಟ್‍ಗೆ ಇರುತ್ತದೆ ಎಂದು ಹೇಳಿದರು.
ಅಲ್ಲದೆ ಮಸೀದಿ ನಿರ್ಮಾಣಕ್ಕಾಗಿ ಸುನ್ನಿ ವಕ್ಫ್ ಬೋರ್ಡ್‍ಗೆ 5 ಎಕರೆ ಜಾಗ ನೀಡಲು ಉತ್ತರ ಪ್ರದೇಶ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅಯೋಧ್ಯಾ ಭೂವಿವಾದ ಅಂತಿಮ ತೀರ್ಪನ್ನು ಈ ದೇಶದ ಜನರು ಸ್ವೀಕರಿಸಿದ ರೀತಿಯನ್ನು ಮೋದಿ ಕೊಂಡಾಡಿದರು. ರಾಮ ಜನ್ಮಭೂಮಿ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದ ಬಳಿಕ ದೇಶದ ಜನರು ಪ್ರಜಾ ಪ್ರಭುತ್ವದ ಪ್ರಕ್ರಿಯೆಗಳಲ್ಲಿ ಹಾಗೂ ಕಾರ್ಯವಿಧಾನ ಗಳಲ್ಲಿ ತಮ್ಮ ನಂಬಿಕೆ ಎಷ್ಟು ಎಂಬುದನ್ನು ತೋರಿಸಿದ್ದಾರೆ. ಅವರೆಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಟ್ರಸ್ಟ್‍ಗೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನೇಮಕ
ನವದೆಹಲಿ/ಉಡುಪಿ, ಫೆ.5- ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾ ಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಿದ್ದು, ಇದಕ್ಕೆ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಂದು ನಾಮ ಕರಣ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ದಂತೆ ಈ ಟ್ರಸ್ಟ್ ರಚಿಸಲಾ ಗಿದ್ದು, ರಾಮಮಂದಿರ ನಿರ್ಮಾಣದ ಎಲ್ಲಾ ಕಾರ್ಯ ಗಳನ್ನು ಇದೇ ಟ್ರಸ್ಟ್ ನೋಡಿಕೊಳ್ಳಬೇಕು. ಇದು ಸಂಪೂರ್ಣವಾಗಿ ಸ್ವಾಯತ್ತ ಟ್ರಸ್ಟ್ ಆಗಿ ಕಾರ್ಯ ನಿರ್ವಹಿಸಲಿದೆ. ರಾಮಮಂದಿರ ನಿರ್ಮಾಣವಾಗುವ ಜಾಗದ ಪಕ್ಕದಲ್ಲೇ ಕೇಂದ್ರ ಸರ್ಕಾರ ಟ್ರಸ್ಟ್‍ಗೆ 67 ಹೆಕ್ಟೇರ್ ಜಾಗವನ್ನು ನೀಡಿದೆ. ಈ ಟ್ರಸ್ಟ್ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ. ಇನ್ನು ಅಯೋಧ್ಯೆ ರಾಮಮಂದಿರ ಟ್ರಸ್ಟ್‍ಗೆ ವಿಶ್ವಸ್ಥ ರಾಗಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನೇಮಕವಾಗಿದ್ದಾರೆ. ಕೃಷ್ಣೈಕ್ಯರಾದ ವಿಶ್ವೇಶ ತೀರ್ಥರ ಶಿಷ್ಯರಾಗಿರೋ ವಿಶ್ವಪ್ರಸನ್ನ ತೀರ್ಥರನ್ನು ಈ ಪುಣ್ಯ ಕಾರ್ಯಕ್ಕೆ ಕೇಂದ್ರ ಸರ್ಕಾರ ನೇಮಿಸಿದೆ.
ಅಯೋಧ್ಯೆಯ ರಾಮ ಮಂದಿರ ವಿಷಯವಾಗಿ ಸುಪ್ರೀಂಕೋರ್ಟ್‍ನ ಮಾರ್ಗಸೂಚಿಯಂತೆ ‘ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ ಸ್ಥಾಪಿಸುವ ಕೇಂದ್ರದ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಪ್ರಧಾನಿಯನ್ನು ವೈಯಕ್ತಿಕವಾಗಿ ಹಾಗೂ ಜನತೆ ಪರವಾಗಿ ಅಭಿ ನಂದಿಸುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.