ಅಪ್ಪಟ ದೇಶೀ ವೇಷ ಪಂಚೆ, ಶರ್ಟ್ ಧರಿಸಿ ಚೀನಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ
ಮೈಸೂರು

ಅಪ್ಪಟ ದೇಶೀ ವೇಷ ಪಂಚೆ, ಶರ್ಟ್ ಧರಿಸಿ ಚೀನಾ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

October 12, 2019

ಚೆನ್ನೈ: ಎರಡು ದಿನ ಭಾರತ ಪ್ರವಾಸ ದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಶುಕ್ರವಾರ ಸಂಜೆ ಮಹಾಬಲಿಪುರಂಗೆ ಆಗಮಿಸಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ತಮಿಳು ನಾಡು ರಾಜ್ಯಪಾಲ ಬನ್ವರಿಲಾಲ್ ಪುರೋ ಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿ ಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅದ್ಧೂರಿ ಸ್ವಾಗತ ನೀಡಿದರು.

ಇಂದು ಮಧ್ಯಾಹ್ನ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಚೀನಾ ಅಧ್ಯಕ್ಷರಿಗೆ ಸಾಂಪ್ರದಾಯಿಕ ನೃತ್ಯದ ಮೂಲಕ ತಮಿಳು ನಾಡು ಸರ್ಕಾರ ಅಭೂತಪೂರ್ವ ಸ್ವಾಗತ ಕೋರಿತು. ವಿಮಾನ ನಿಲ್ದಾಣದಿಂದ ನೇರ ವಾಗಿ ಖಾಸಗಿ ಹೋಟೆಲ್ ಗೆ ತೆರಳಿದ ಕ್ಸಿ ಜಿನ್ ಪಿಂಗ್ ಅವರು 4 ಗಂಟೆಗೆ ರಸ್ತೆ ಮೂಲಕ ಮಹಾಬಲಿಪುರಂಗೆ ಆಗಮಿಸಿ ದರು. ಮಹಾಬಲಿಪುರಂನಲ್ಲಿ ಚೀನಾ ಅಧ್ಯ ಕ್ಷರ ಆಗಮನಕ್ಕಾಗಿ ಕಾಯುತ್ತಿದ್ದ ಪ್ರಧಾನಿ ಮೋದಿ ಅವರು, ದಕ್ಷಿಣ ಭಾರತದ ಸಾಂಪ್ರ ದಾಯಿಕ ಧಿರಿಸು ಪಂಚೆ ಧರಿಸಿ ಕ್ಸಿ ಜಿನ್ ಪಿಂಗ್ ಅವರನ್ನು ಬರಮಾಡಿಕೊಂಡರು. ಅಲ್ಲದೆ ಐತಿಹಾಸಿಕ ತಾಣ ಮಹಾಬಲಿ ಪುರಂ ಕುರಿತು ಚೀನಾ ಅಧ್ಯಕ್ಷರಿಗೆ ಸ್ವತಃ ಗೈಡ್ ಮಾಡಿದರು.

ಉಭಯ ನಾಯಕರು ಅಲ್ಲಿನ ಸ್ಮಾರಕ ಗಳನ್ನು ವೀಕ್ಷಿಸಿದರು. ಮಹಾಬಲಿಪುರಂನ ದೇಗುಲಕ್ಕೂ ಮೋದಿ, ಕ್ಸಿ ಜಿನ್‍ಪಿಂಗ್ ಭೇಟಿ ನೀಡಿದರು. ತಮಿಳುನಾಡಿನ ಮಹಾ ಬಲಿಪುರಂನಲ್ಲಿ ಚೀನಾ ಪ್ರಧಾನಿ ಜೊತೆಗೆ ಮೋದಿ ಬಿಳಿ ಪಂಚೆ ಹಾಗೂ ಬಿಳಿ ಅಂಗಿ ಜೊತೆಗೆ ಹೆಗಲಿಗೊಂದು ಶಾಲು ಹಾಕಿ ಕೊಂಡು ಭಿನ್ನವಾಗಿ ಕಾಣಿಸಿಕೊಂಡಿದ್ದು, ಪ್ರಧಾನಿ ಮೋದಿಯವರ ದಕ್ಷಿಣದ ವಸ್ತ್ರ ಶೈಲಿ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಸದ್ದು ಮಾಡುತ್ತಿದೆ. ಎರಡು ದೇಶಗಳ ನಾಯಕರು ಭೇಟಿ ನೀಡಿದ ಹಿನ್ನೆಲೆಯಲ್ಲಿ 5 ಸಾವಿರಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.

ಕಳೆದ ವರ್ಷ ಏಪ್ರಿಲ್‍ನಲ್ಲಿ ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ವಹಿವಾಟನ್ನು ಸುಧಾರಿಸುವ ಹಾಗೂ ಎರಡೂ ರಾಷ್ಟ್ರಗಳ ಅಂತಾರಾಷ್ಟ್ರೀಯ ಮತ್ತು ಪ್ರಾದೇಶಿಕ ಹಿತಾ ಸಕ್ತಿಯನ್ನು ಕಾಯ್ದುಕೊಳ್ಳುವ ಸಲುವಾಗಿ ಚೀನಾದ ವುಹಾನ್ ಎಂಬಲ್ಲಿ ಉಭಯ ನಾಯಕರು ಮೊದಲ ಬಾರಿಗೆ ಅನೌಪ ಚಾರಿಕ ಶೃಂಗಸಭೆ ನಡೆಸಿದ್ದರು. ಈ ವೇಳೆ ಅನೇಕ ಪ್ರಮುಖ ವಿಚಾರಗಳ ಕುರಿತು ಚರ್ಚೆ ಮಾಡಿದ್ದರು. ಜಮ್ಮು ಮತ್ತು ಕಾಶ್ಮೀ ರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್‍ಪಿಂಗ್ ಮೊದಲ ಬಾರಿಗೆ ಭೇಟಿಯಾಗುತ್ತಿದ್ದು, ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಜಾಗತಿಕ ನಾಯಕ ರಾಗಲು ಪೈಪೆÇೀಟಿ ನಡೆಸುತ್ತಿರುವ ಪ್ರಧಾನಿ ಮೋದಿ ಹಾಗೂ ಕ್ಸಿ ಜಿನ್’ಪಿಂಗ್ ಉಭಯ ದೇಶಗಳ ನಡುವೆ ಇರುವ ಹಲವು ವಿವಾದ ಗಳಿಂದ ಜಾಗತಿಕ ವೇದಿಕೆಯಲ್ಲಿ ಅಖಂಡ ವೈರಿಗಳೆಂದೇ ಪರಿಗಣಿಸಲ್ಪಡುತ್ತಾರೆ. ಆದರೆ, ಅನೌಪಚಾರಿಕ ಭೇಟಿಯ ವಿಚಾರಕ್ಕೆ ಬಂದಾಗ ಇಬ್ಬರೂ ಇನ್ನಿಲ್ಲದ ಸ್ನೇಹಿತ ರಂತೆ ಬಿಂಬಿಸಿಕೊಳ್ಳುತ್ತಾ ಬಂದಿದ್ದಾರೆ.

Translate »