ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ
ಮೈಸೂರು

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ

May 19, 2019

ಕೇದಾರನಾಥ: ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಗೆ ತೆರಳಿ ಪ್ರಧಾನಿ ಮೋದಿ ಧ್ಯಾನ! ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ ಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯ ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜ ರಾತ್‍ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿನ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನೂ ನಡೆಸಿದರು.

Translate »