ಪ್ರಧಾನಿ ಮೋದಿ ಪರಮಾಪ್ತ, ಎ.ಕೆ.ಶರ್ಮಾ ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆ

ಲಖನೌ, ಜೂ.19- ಮುಂದಿನ ವರ್ಷ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನ ರಾಜ್ಯದ ಬಿಜೆಪಿ ಉಪಾಧ್ಯಕ್ಷರಾಗಿ ಪ್ರಧಾನಿ ಮೋದಿ ಪರಮಾಪ್ತ, ಮಾಜಿ ಐಎಎಸ್ ಅಧಿಕಾರಿ ಎಕೆ ಶರ್ಮಾರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಅರ್ಚನಾ ಮಿಶ್ರಾ ಮತ್ತು ಅಮಿತ್ ಬಾಲ್ಮಿಕಿಯನ್ನು ಉತ್ತರ ಪ್ರದೇಶ ಉಸ್ತುವಾರಿಯಾಗಿ ನೇಮಿಸಲಾಗಿದೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು ರಾಜ್ಯದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ. ಈ ತಿಂಗಳ ಆರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಸ್ಥೆ) ಬಿಎಲ್ ಸಂತೋಷ್ ಮತ್ತು ಉತ್ತರ ಪ್ರದೇಶದ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ರಾಜ್ಯ ಸಚಿವರು ಮತ್ತು ಮುಖಂಡ ರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದರು. ಮೂಲಗಳ ಪ್ರಕಾರ, ಪರಿಶೀಲನಾ ಸಭೆಗಳ ಪ್ರತಿಕ್ರಿಯೆಯ ಆಧಾರದ ಮೇಲೆ, ಆಡಳಿತಾರೂಢ ಬಿಜೆಪಿ ಉತ್ತರಪ್ರದೇಶದಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆಗಳನ್ನು ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿಶ್ವಾಸಾರ್ಹ ಲೆಫ್ಟಿನೆಂಟ್ ಎಂದು ನಂಬಿರುವ ಗುಜರಾತ್ ಕೇಡರ್ 1988ರ ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಜನವರಿಯಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.