ನವದೆಹಲಿ,ನ.8-ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಯವರ 93ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿ ದ್ದಾರೆ. “ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ” ಎಂದು ಅವರು ಹೇಳಿದ್ದಾರೆ. ಹಿಂದಿ ಭಾಷೆಯಲ್ಲಿ ಮಾಡಿದ ಟ್ವೀಟ್ ನಲ್ಲಿ ಮೋದಿ, ಅಟಲ್ ಬಿಹಾರಿ ವಾಜ ಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನಿಯಾಗಿದ್ದ ಅಡ್ವಾಣಿ ದೇಶದ ಅಭಿವೃದ್ಧಿಯಲ್ಲಿ ಮಹ ತ್ವದ ಪಾತ್ರ ವಹಿಸಿದ್ದಾರೆ ಮತ್ತು ಪಕ್ಷ ವನ್ನು ಜನಸಾಮಾನ್ಯರತ್ತ ಕೊಂಡೊಯ್ದಿ ದ್ದಾರೆ. ಕೋಟ್ಯಾಂತರ ಬಿಜೆಪಿ ಕಾರ್ಯ ಕರ್ತರಿಗೆ ಮತ್ತು ದೇಶವಾಸಿಗಳಿಗೆ “ಜೀವಂತ ಸ್ಫೂರ್ತಿ” ಎಂದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಪಕ್ಷದ ಹಿರಿಯ ನೇತಾರ, ಮಾಜಿ ಉಪಪ್ರಧಾನಮಂತ್ರಿ ಅಡ್ವಾಣಿ ಅವರಿಗೆ ಜನ್ಮದಿನದ ಆದರ ಪೂರ್ವಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.
