ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ಯೋಗ
ಮೈಸೂರು

ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ಯೋಗ

May 31, 2022

ಮೈಸೂರು, ಮೇ 30(ಎಸ್‍ಬಿಡಿ)-ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಐತಿಹಾಸಿಕ ನಗರಿ ಮೈಸೂರಿನ ಅಂಬಾ ವಿಲಾಸ ಅರಮನೆ ಆವ ರಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಯೋಗ ಪ್ರಮುಖರೊಡನೆ ಸಭೆ ನಡೆಸಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸ ದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಯೋಗ ದಿನ ಆಚರಿಸುವ ಸ್ಥಳದ
ಬಗ್ಗೆ ಸ್ಪಷ್ಟಪಡಿಸಿದರು. ವಿಶ್ವ ಮನ್ನಣೆಗೆ ಪಾತ್ರವಾಗಿರುವ ಯೋಗ ದಿನವನ್ನು ಪ್ರತಿವರ್ಷ ಜೂನ್ 21ರಂದು ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮವನ್ನು ಐತಿಹಾಸಿಕ ಹಾಗೂ ಪಾರಂಪರಿಕ ಸ್ಥಳದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣ ಸೂಕ್ತವಾಗಿದೆ. ಪ್ರಧಾನಿ ಮೋದಿ ಅವರು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಮೈಸೂರಿನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸುತ್ತಿದ್ದು, ಇದು ಎಲ್ಲರಿಗೂ ಹೆಮ್ಮೆಯ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಪ್ರಧಾನಿಯವರ ಮೈಸೂರು ಪ್ರವಾಸ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿಸಿದರು.

ಅಂದಿನ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ 75 ಸಾವಿರ ಜನರನ್ನು ಸೇರಿಸುವ ಉದ್ದೇಶವಿದೆ. ಆದರೆ ಇಷ್ಟೊಂದು ಸಂಖ್ಯೆಯ ಜನರಿಗೆ ಅರಮನೆ ಆವರಣದಲ್ಲಿ ಸ್ಥಳಾವಕಾಶ ಆಗುವುದಿಲ್ಲ. ಆದ್ದರಿಂದ ಅರಮನೆ ಆವರಣದಿಂದ ಸರಪಳಿ ಮಾದರಿಯಲ್ಲಿ ಬೇರೆ ಬೇರೆ ಸ್ಥಳದಲ್ಲೂ ಯೋಗ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿ, ಅಲ್ಲಲ್ಲಿ ಬೃಹತ್ ಎಲ್‍ಇಡಿ ಪರದೆಗಳನ್ನು ಅಳವಡಿಸುವ ಮೂಲಕ ಜನರನ್ನು ಸಂಪರ್ಕಿಸುವ ಚಿಂತನೆ ಮಾಡ ಲಾಗಿದೆ. ಯೋಗ ದಿನಾಚರಣೆ ಆಯೋಜನೆಗೆ ಅಗತ್ಯ ತಯಾರಿ ಮಾಡಿಕೊಳ್ಳ ಲಾಗುತ್ತಿದ್ದು, ಪೂರ್ವಭಾವಿಯಾಗಿ ಕೆಲ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದರು.

ವಿಶ್ವದ 140ಕ್ಕೂ ಹೆಚ್ಚು ದೇಶಗಳು ಯೋಗ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಮೆರಿಕಾ, ಜಪಾನ್, ಆಸ್ಟ್ರೇಲಿಯಾ ಇನ್ನಿತರ ದೇಶಗಳಲ್ಲಿ ನಿರಂತರವಾಗಿ ಯೋಗ ತರಬೇತಿ ನೀಡುತ್ತಿರುವ ಬಗ್ಗೆ ಮಾಹಿತಿ ಇದೆ. ಎಲ್ಲರೂ ರೂಢಿಸಿಕೊಳ್ಳಬಹುದಾದ ಯೋಗದಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ಸಾಧ್ಯ ಎನ್ನುವುದು ಸಾಬೀತಾಗಿರುವ ಕಾರಣ, ಯೋಗ ಜಾಗೃತಿ ವೇಗವಾಗಿ ವ್ಯಾಪಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಡಂಗೂರ ಭಾರಿಸಿ ಹೇಳಲ್ಲ: ಯೋಗ ದಿನಾಚರಣೆಗೆ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ಇಲ್ಲಿಗೆ ಏನಾದರೂ ವಿಶೇಷ ಯೋಜನೆ ಘೋಷಿಸುತ್ತಾರಾ? ಎನ್ನುವ ಪ್ರಶ್ನೆಯನ್ನು ಗಮನಿಸಿದ್ದೇನೆ. ಯೋಜನೆಗಳ ಬಗ್ಗೆ ಎಂದೂ ನಾವು ಡಂಗೂರ ಬಾರಿಸಿಕೊಂಡು ಹೇಳಿಲ್ಲ, ಬದಲಾಗಿ ಕೆಲಸ ಮಾಡಿ ತೋರಿಸುತ್ತೇವೆ. ಪ್ರಧಾನಿಯವರು ಮೈಸೂರಿಗೆ ಅನೇಕ ಕೊಡುಗೆ ನೀಡಿದ್ದಾರೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ನೀಡಿ ಅತ್ಯುನ್ನತ ಕೇಂದ್ರವಾಗಿ ಪರಿವರ್ತಿಸುವ ಯೋಜನೆ ಬಗ್ಗೆ ಎಲ್ಲಿಯೂ ಹೇಳಿರಲಿಲ್ಲ. ಮೈಸೂರು-ಬೆಂಗಳೂರು ಹೆದ್ದಾರಿ ವಿಸ್ತರಣೆ, ವಾಕ್ ಮತ್ತು ಶ್ರವಣ ಸಂಸ್ಥೆಯ ಯೋಜನೆ ಯೊಂದಕ್ಕೆ 150 ಕೋಟಿ ರೂ. ಅನುದಾನ, ಹೆಚ್ಚುವರಿ ರೈಲು ಸಂಚಾರ, ರೈಲು ನಿಲ್ದಾಣ ಗಳ ಮೇಲ್ದರ್ಜೆಗೇರಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ನೀಡಿಲ್ಲವೇ? ಎಂದು ಕೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜು, ಮುಡಾ ಅಧ್ಯP್ಷÀ ಎಚ್.ವಿ.ರಾಜೀವ್, ಮೈಲ್ಯಾಕ್ ಅಧ್ಯP್ಷÀ ಫಣೀಶ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ನಗರಾಧ್ಯಕ್ಷ ಶ್ರೀವತ್ಸ, ಮಾಜಿ ಮೇಯರ್ ಸಂದೇಶ್ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ದೇವನೂರು ಪ್ರತಾಪ್, ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್ ಮತ್ತಿತರರಿದ್ದರು.

Translate »