ಕೊರೊನಾ ಆತಂಕದ ನಡುವೆಯೂ ಪಶ್ಚಿಮಬಂಗಾಳದಲ್ಲಿ ಪ್ರಧಾನಿ ಪ್ರಚಾರ ಕೋವಿಡ್ ನಿರ್ಬಂಧ ಉಲ್ಲಂಘನೆಯಡಿ  ಕೋರ್ಟ್ ಸುಮೊಟೊ ಪ್ರಕರಣ ದಾಖಲಿಸಲಿ
ಮೈಸೂರು

ಕೊರೊನಾ ಆತಂಕದ ನಡುವೆಯೂ ಪಶ್ಚಿಮಬಂಗಾಳದಲ್ಲಿ ಪ್ರಧಾನಿ ಪ್ರಚಾರ ಕೋವಿಡ್ ನಿರ್ಬಂಧ ಉಲ್ಲಂಘನೆಯಡಿ ಕೋರ್ಟ್ ಸುಮೊಟೊ ಪ್ರಕರಣ ದಾಖಲಿಸಲಿ

April 20, 2021

ಮೈಸೂರು,ಏ.19(ಪಿಎಂ)- ಕೋವಿಡ್ ನಿಯಮ ಪಾಲನೆ ಬಗ್ಗೆ ದೇಶದ ಜನತೆಗೆ ಪಾಠ ಹೇಳುವ ಪ್ರಧಾನಿ ನರೇಂದ್ರ ಮೋದಿಯವರೇ ಪಶ್ಚಿಮಬಂಗಾಳದ ಚುನಾ ವಣಾ ಪ್ರಚಾರ ಸಭೆಯಲ್ಲಿ ಹೆಚ್ಚು ಜನ ಸೇರಿಸಿ, ಭಾಷಣ ಮಾಡಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿರುವ ಕರ್ನಾ ಟಕ ರಾಜ್ಯ ರೈತಸಂಘ, ಈ ಸಂಬಂಧ ನ್ಯಾಯಾಂಗ ವ್ಯವಸ್ಥೆಯಾದರೂ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಪ್ರಧಾನಿ ಸೇರಿದಂತೆ ಹಲವು ರಾಜಕಾರಣಿಗಳು ಕೊರೊನಾ ಸೋಂಕು ತಡೆಗೆ ವಿಧಿಸಿರುವ ನಿಯಮಗಳನ್ನು ಪ್ರಜ್ಞಾಪೂರ್ವಕವಾಗಿಯೇ ಉಲ್ಲಂಘನೆ ಮಾಡುತ್ತಿದ್ದಾರೆ. ಪಶ್ಚಿಮಬಂಗಾಳದ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಹೆಚ್ಚು ಜನರನ್ನು ಸೇರಿಸಿ, ಭಾಷಣ ಮಾಡಿರುವುದಲ್ಲದೆ, ಭಾರೀ ಜನ ಸೇರಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಲು ಕಾರ್ಯಾಂಗ ಹಿಂದೇಟು ಹಾಕಬಹುದು. ಆದರೆ ನ್ಯಾಯಾಂಗವಾದರೂ ಸ್ವಯಂಪ್ರೇರಿತ ಪ್ರಕರಣ ದಾಖ ಲಿಸಬೇಕು ಎಂದು ಆಗ್ರಹಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಉಚಿತ ಚಿಕಿತ್ಸೆ ದೊರೆಯುವಂತೆ ಸರ್ಕಾರ ಕ್ರಮ ವಹಿಸಬೇಕು. ಪ್ರತಿಯೊಬ್ಬ ರಿಗೂ ಕೋವಿಡ್ ಲಸಿಕೆ ಹಾಕಬೇಕು. ಈ ಸಾಲಿನ ಕೃಷಿ ಕೆಲಸಕ್ಕೆ ಅನುಕೂಲವಾಗುವಂತೆ ಈಗಿನಿಂದಲೇ ಸಹಕಾರ ಸಂಘ ಮತ್ತು ಬ್ಯಾಂಕುಗಳಲ್ಲಿ ಕೃಷಿ ಸಾಲ ವಿತರಿಸಬೇಕು. ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಪಂಚಾಯಿತಿ ವ್ಯಾಪ್ತಿಯಲ್ಲೇ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಹಾಪ್‍ಕಾಮ್ಸ್ ಮತ್ತು ಆರ್‍ಎಂಸಿಯಲ್ಲಿ ನೋಂದಣಿ ಮಾಡಿಕೊಂಡಿರುವ ದಲ್ಲಾಳಿಗಳು ರೈತರ ಜಮೀನು ಗಳಲ್ಲೇ ತರಕಾರಿಗಳನ್ನು ಖರೀದಿಸಿ, ಸಾಗಿಸುವಂತಹ ವ್ಯವಸ್ಥೆ ಮಾಡಬೇಕು. ಕೃಷಿ ಪರಿಕರ ಮತ್ತು ಸಹಾಯ ಧನ ನೀಡು ವುದನ್ನು ಹೆಚ್ಚು ವಿಸ್ತರಿಸಬೇಕು. ಕೃಷಿ ಕಾರ್ಮಿಕರ ಕನಿಷ್ಠ 200 ದಿನಗಳ ಕೆಲಸ ಖಾತ್ರಿಗಾಗಿ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು. ಜೊತೆಗೆ ಈ ಯೋಜನೆಯನ್ನು ಎಲ್ಲಾ ರೀತಿಯ ಕೃಷಿ ಚಟುವಟಿಕೆಗಳಿಗೂ ವಿಸ್ತರಿಸಬೇಕು. ಗ್ರಾಮ ಗಳಿಗೆ ಮರಳುತ್ತಿರುವ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಪಡಿತರ ಪ್ರಮಾಣ ಹೆಚ್ಚು ಮಾಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ರಾಸಾಯನಿಕ ಗೊಬ್ಬರದ ಬೆಲೆ ಹೆಚ್ಚಿಸುವ ಮೂಲಕ ಕೃಷಿಯಿಂದ ರೈತರು ವಿಮುಖರಾಗುವಂತೆ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಏ.26ರಂದು ಬೆಳಗ್ಗೆ 11ರಿಂದ 12.30ರವರೆಗೆ ರಾಜ್ಯದ ಎಲ್ಲಾ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅವರ ಮೂಲಕ ಗೊಬ್ಬರದ ಬೆಲೆ ಇಳಿಕೆ ಮಾಡುವಂತೆ ಒತ್ತಾಯ ಪತ್ರವನ್ನು ಪ್ರಧಾನಿಗಳಿಗೆ ಕಳುಹಿಸಲಾಗುವುದು. ಕೊರೊನಾ ನಿಯಮಗಳ ಪಾಲನೆಯೊಂದಿಗೆ ಈ ಹೋರಾಟ ನಡೆಸಲಿದ್ದೇವೆ. ರಾಜ್ಯದವರೇ ಆದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಅವರ ಮನೆ ಎದುರು ಕೂಡ ಏ.24 ಅಥವಾ 25ರಂದು ಪ್ರತಿ ಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಕೃಷಿ ಪಂಪ್‍ಸೆಟ್‍ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡದಿರುವುದು, ಟ್ರಾನ್ಸ್‍ಫಾರ್ಮರ್ ದುರಸ್ತಿ ಹಾಗೂ ಅಳವಡಿಕೆಯ ವಿಳಂಬ ಧೋರಣೆ ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುತ್ ಪ್ರಸರಣ ನಿಗಮಗಳ ಕಚೇರಿ ಮುಂದೆಯೂ ಶೀಘ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕೃಷಿಯಲ್ಲಿ ರಾಸಾಯನಿಕ ಗೊಬ್ಬರ ಬಳಕೆಯಿಂದ ಮಣ್ಣಿನ ಫಲವತ್ತತೆ ಹಾಳಾಗುತ್ತಿದ್ದು, ಕೃಷಿ ಉತ್ಪನ್ನಗಳು ವಿಷಯುಕ್ತವೂ ಆಗುತ್ತಿದೆ. ರಾಸಾಯನಿಕ ಗೊಬ್ಬರದ ಬೆಲೆ ದುಬಾರಿ ಯಾಗುತ್ತಿರುವ ಈ ಸಂದರ್ಭದಲ್ಲಿಯಾದರೂ ರೈತರು ನೈಸ ರ್ಗಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಮನವಿ ಮಾಡಿದರು. ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್, ಮೈಸೂರು ತಾಲೂಕು ಅಧ್ಯಕ್ಷ ಪಿ.ಮರಂಕಯ್ಯ ಗೋಷ್ಠಿಯಲ್ಲಿದ್ದರು.

Translate »