ಮೈಸೂರು: ವೈದ್ಯಕೀಯ ಸ್ನಾತಕೋತ್ತರ ಪದವಿ ಪ್ರವೇಶದಲ್ಲಿ ಹೊರ ರಾಜ್ಯದವರಿಗೆ ಮಣೆ ಹಾಕುತ್ತಿದ್ದು, ಇದರಿಂದ ರಾಜ್ಯದವರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವ ವೈದ್ಯರ ಸಂಘದ ರಾಜ್ಯಾಧ್ಯಕ್ಷ ಡಾ.ಭರತ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಿರುವ ಪಿಜಿ (ಸ್ನಾತಕೋತ್ತರ ಪದವಿ) ಸೀಟುಗಳಲ್ಲಿ ಶೇ.50ರಷ್ಟು ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದರಿಂದ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗುತ್ತಿದೆ. ಹಣದಾಸೆಗಾಗಿ ಖಾಸಗಿ ಕಾಲೇಜುಗಳು ತಮ್ಮಲ್ಲಿರುವ ಸೀಟ್ಗಳನ್ನು ಹೆಚ್ಚಾಗಿ ಹೊರರಾಜ್ಯದವರಿಗೆ ನೀಡುತ್ತಿವೆ ಎಂದು ಆರೋಪಿಸಿದರು.
ಹೊರ ರಾಜ್ಯದ ವಿದ್ಯಾರ್ಥಿಗಳು ಇಲ್ಲಿನ ಭಾಷೆ ತಿಳಿಯದ ಹಿನ್ನೆಲೆಯಲ್ಲಿ ರೋಗಿಗಳೊಡನೆ ಸಂವಹನ ಸಮಸ್ಯೆ ಆಗುತ್ತಿದೆ. ಈ ನಿಟ್ಟಿನಲ್ಲಿ ಮುಕ್ತ ಕೋಟಾದ ಎಲ್ಲಾ ಸೀಟ್ಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿರಿಸಬೇಕೆಂದು ಒತ್ತಾಯಿಸಿದರು. ಕರ್ನಾಟಕ ಕನ್ನಡ ವೇದಿಕೆ ರಾಜ್ಯಾಧ್ಯP್ಷÀ ಸುರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಡೈರಿ ವೆಂಕಟೇಶ್ ಮತ್ತಿತರರು ಗೋಷ್ಠಿಯಲ್ಲಿದ್ದರು.