ಖಾಸಗಿ ಬಸ್, ಲಾರಿ ಮುಖಾಮುಖಿ ಡಿಕ್ಕಿ
ಹಾಸನ

ಖಾಸಗಿ ಬಸ್, ಲಾರಿ ಮುಖಾಮುಖಿ ಡಿಕ್ಕಿ

July 13, 2018

ಹಾಸನ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಹೊರವಲಯದ ನುಗ್ಗೇಹಳ್ಳಿ ಕ್ರಾಸ್ ಬಳಿ ಗುರುವಾರ ನಡೆದಿದೆ.

ವಿಆರ್‍ಎಲ್ ಮತ್ತು ದುರ್ಗಾಂಬಾ ಟ್ರಾವೆಲ್ಸ್ ಎಂಬ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅತೀವೇಗವಾಗಿ ವಾಹನವನ್ನು ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದ್ದು, ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »