ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳ ಸಭೆ
ಮೈಸೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳ ಸಭೆ

March 24, 2020
  • ಕೊರೊನಾ ಸಂಹಾರಕ್ಕೆ ಕೈಜೋಡಿಸಿದ ಖಾಸಗಿ ಆಸ್ಪತ್ರೆಗಳು
  • ಖಾಸಗಿ ಆಸ್ಪತ್ರೆಯ ಶೇ.50ರಷ್ಟು ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ ಒದಗಿಸುವ ಭರವಸೆ

ಮೈಸೂರು, ಮಾ.23(ಪಿಎಂ)- ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯ ಶೇ.50ರಷ್ಟು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ ಒದಗಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಮವಾರ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ವೈದ್ಯರೊಂದಿಗೆ ಸಭೆ ನಡೆಸಿ, ಕೋವಿಡ್-19 ಅನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವಂತೆ ಖಾಸಗಿ ಆಸ್ಪತ್ರೆಗಳು, ತಜ್ಞ ವೈದ್ಯರು ಹಾಗೂ ಪರಿಣತರಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಭರವಸೆ ಸಿಕ್ಕಿದೆ.

ಅಲ್ಲದೆ, ಸಭೆಯಲ್ಲಿ ಪರಿಣತರು ನೀಡಿದ ಸಲಹೆಗಳನ್ನು ಗಂಭೀರ ವಾಗಿ ಪರಿಗಣಿಸಲು ಸರ್ಕಾರ ಮುಂದಾಗಿದೆ. ಕೋವಿಡ್ ಸೋಂಕಿ ತರ ಸಂಪರ್ಕಕ್ಕೆ ಬಂದ ದೊಡ್ಡ ಸಂಖ್ಯೆಯ ಜನತೆಯನ್ನು ಕ್ವಾರಂಟೈನ್ ನಲ್ಲಿ ಇಡುವುದು ದೊಡ್ಡ ಸವಾಲು. ಹೀಗಾಗಿ ಲಾಕ್‍ಡೌನ್ ಮಾಡುವುದೇ ಸೂಕ್ತ ಪರಿಹಾರ ಎಂದು ಪರಿಣತರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.

ಫೀವರ್ ಕ್ಲಿನಿಕ್‍ಗಳನ್ನು ಸ್ಥಾಪಿಸಿ, ಪ್ರಾಥಮಿಕ ಪರೀಕ್ಷೆ ನಡೆಸು ವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ 30 ಫೀವರ್ ಕ್ಲಿನಿಕ್ ಸ್ಥಾಪಿಸಲು ನಿರ್ಧರಿಸ ಲಾಯಿತು. ಅಲ್ಲದೆ, 100ಕ್ಕೂ ಹೆಚ್ಚು ವೆಂಟಿಲೇಟರ್‍ಗಳನ್ನು ಒದಗಿ ಸಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿದವು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1,200 ಹಾಸಿಗೆಗಳ ಪ್ರತ್ಯೇಕ ಬ್ಲಾಕ್ ಗುರುತಿಸುವ ಜೊತೆಗೆ ಖಾಸಗಿ ಆಸ್ಪತ್ರೆಯೊಂದನ್ನೂ ಕೊರೊನಾ ಚಿಕಿತ್ಸೆಗಾಗಿ ಗುರುತಿಸಲು ಸಹಕಾರ ನೀಡುವುದಾಗಿ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಭರವಸೆ ಮೂಡಿಸಿದರು.

ಕೋವಿಡ್-19 ತೊಡೆಯಲು ಸರ್ಕಾರ- ಖಾಸಗಿ ಸಹಭಾಗಿತ್ವ ಬಲಪಡಿಸಲು ಹಾಗೂ ಜನತೆಗೆ ಈ ಸೋಂಕಿನ ಗಂಭೀರತೆ ಬಗ್ಗೆ ಅರಿವು ಮೂಡಿಸಲು ತೀರ್ಮಾನಿಸಲಾಯಿತು. ಈ ನಿಟ್ಟಿನಲ್ಲಿ ನಗರ ಪ್ರದೇಶದಲ್ಲಿ ವಾಸವಾಗಿರುವ ಜನತೆ ಕೋವಿಡ್ ಸೋಂಕು ಮುಕ್ತವಾಗಿರುವ ಹಳ್ಳಿಗಳಿಗೆ ತೆರಳಬಾರದು. ಸೋಂಕು ಹರಡುವುದನ್ನು ತಡೆ ಯಲು ಸರ್ಕಾರದೊಂದಿಗೆ ಸಹಕರಿಸಿ ಮನೆಯಲ್ಲೇ ಇರಬೇಕು ಎಂಬ ಸಂದೇಶ ಪಸರಿಸಲು ನಿರ್ಣಯಿಸಲಾಯಿತು.

ಸಾಮಾಜಿಕ ಅಂತರಕ್ಕೆ ಸರ್ಕಾರದ ಕ್ರಮ: ರಾಜ್ಯಾದ್ಯಂತ ಮಾ.31ರವರೆಗೆ ಮೈಸೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸುವುದು. ಎಲ್ಲಾ ಅತ್ಯಗತ್ಯ ಸೇವೆ ಹೊರತಾಗಿ ಉಳಿದೆಲ್ಲಾ ಸೇವೆ ಸ್ಥಗಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಸಾರಿಗೆ ಮತ್ತು ಗೃಹ ಇಲಾಖೆ ಸಭೆ ನಡೆಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರ ಸೂಚನೆ ನೀಡಿದೆ.

ಜೊತೆಗೆ ಹೋಂ ಕ್ವಾರಂಟೈನ್ (ಗೃಹ ದಿಗ್ಬಂಧನ) ಅನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಯಿತು. ಜೀವನೋಪಾ ಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನತೆಗೆ ಇಂದಿರಾ ಕ್ಯಾಂಟೀನ್‍ನಲ್ಲಿ ಉಚಿತ ಆಹಾರ ಒದಗಿಸಲು ಉದ್ದೇಶಿಸ ಲಾಗಿದೆ. ಬೆಂಗಳೂರು ಕರಗ ಉತ್ಸವಕ್ಕೆ ಅವಕಾಶ ನೀಡದಿರಲು ಹಾಗೂ ದೇವಾಲಯ, ಪ್ರಾರ್ಥನಾಲಯಗಳಲ್ಲಿ ಗುಂಪು ಸೇರುವುದನ್ನು ನಿರ್ಬಂಧಿಸಲು ತೀರ್ಮಾನಿಸಲಾಗಿದೆ. ಹಾಗೂ ಚಿಕಿತ್ಸಾ ಸಲಹೆ ಗಾಗಿ ಮನೆಯಿಂದ ಹೊರ ಬರಲು ಅವಕಾಶ ನೀಡದೇ ಟೆಲಿಕನ್ಸಲ್ಟೇಷನ್‍ಗೆ ಅವಕಾಶ ಕಲ್ಪಿಸಲು ಸರ್ಕಾರ ನಿರ್ಣಯಿಸಿದೆ.

Translate »