ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿ ಪೆÇಲೀಸ್ ಕಸ್ಟಡಿ ಯಲ್ಲಿದ್ದ ಅಮೂಲ್ಯ ಲಿಯೋನಾಳಿಗೆ ಮತ್ತೆ 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾ ಗಿದೆ. 4 ದಿನಗಳ ಕಾಲ ಅಮೂಲ್ಯಳನ್ನು ಪೆÇಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಶನಿವಾರ ಕೋರಮಂಗಲದ ನ್ಯಾಯಾ ಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಮಾ.5ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಪಾಕ್ ಪರ ಘೋಷಣೆ ಕೂಗಿದ ನಂತರ 14 ದಿನಗಳ ಕಾಲ ಅಮೂಲ್ಯ ಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅಮೂಲ್ಯಳ ಹೆಚ್ಚಿನ ವಿಚಾರಣೆ ಅವಶ್ಯ ಕತೆ ಇದ್ದ ಕಾರಣ, ಎಸ್‍ಐಟಿ ತಂಡ ರಚನೆ ಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಅಮೂಲ್ಯಳನ್ನು 4 ದಿನಗಳ ಕಾಲ ಪೆÇಲೀಸ್ ಕಸ್ಟಡಿಗೆ ಪಡೆದಿತ್ತು. ಈ ವೇಳೆ ಕೆಲವೊಂದು ಸ್ಫೋಟಕ ಮಾಹಿತಿಗಳು ಲಭ್ಯವಾಗಿದೆ.