ಹನೂರು ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಸರಮಾಲೆ
ಚಾಮರಾಜನಗರ

ಹನೂರು ಜನಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಸರಮಾಲೆ

October 6, 2018

ಹನೂರು:ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಧ್ಯಕ್ಷತೆಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಸರಮಾಲೆಯೇ ಪ್ರತಿಧ್ವನಿಸಿತು.

ಶಾಗ್ಯ ಗ್ರಾಮದ ಕೆಂಪಣ್ಣ ಮಾತನಾಡಿ, ರಸ್ತೆ ನಿರ್ಮಾಣ ಮಾಡಲು ಪಟ್ಟ ಜಮೀನನ್ನು ಸ್ವಾಧೀನಪಡಿಸಿಕೊಂಡು ಹಲವು ವರ್ಷಗಳೇ ಕಳೆದರೂ ಇದುವರೆಗೂ ಪರಿಹಾರ ವಿತರಿಸಿಲ್ಲ ಎಂದು ಆರೋಪಿಸಿದರು. ಚಂಗಡಿ ಕರಿಯಪ್ಪ ಮಾತನಾಡಿ, ಹನೂರು ತಾಲೂಕಿನಲ್ಲಿ ಮೂರು ಹೋಬಳಿ ಕೇಂದ್ರಗಳಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಅಲ್ಲಿ ಜನಸಂಪರ್ಕ ಸಭೆ ಮಾಡಿದರೆ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ. ಕಾಡುಪ್ರಾಣಿಗಳಿಂದ ಜಮೀನಿನಲ್ಲಿ ಬೆಳೆದಿರುವ ಫಸಲು ನಾಶಗೊಳ್ಳುತ್ತಿವೆ. ಸಂಬಂಧ ಪಟ್ಟ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪರಿಹಾರ ವಿತರಿಸಿಲ್ಲ. ಕೌದಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷಧಿ ಗಳನ್ನು ನೀಡದೆ ಹೊರಗಡೆ ಔಷಧಿ ಕೊಂಡುಕೊಳ್ಳುವಂತೆ ಚೀಟಿ ಬರೆದು ಕೊಡುತ್ತಿದ್ದಾರೆ.

5ರೈತರ ಜಮೀನುಗಳಲ್ಲಿ ಟಿಸಿ ದುರಸ್ತಿಗೊಂಡಿವೆ ಇವನ್ನು ಸರಿಪ ಡಿಸಿಕೊಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋ ಜನವಾಗಿಲ್ಲ. ಚಂಗಡಿ ಗ್ರಾಮಸ್ಥರಿಗೆ ಪುನ ರ್ವಸತಿ ಕಲ್ಪಿಸಿಕೊಡಬೇಕು. ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷ ವಿನೋದ್ ಮಾತನಾಡಿ, ಹನೂರು ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಶಾಗ್ಯ ಹಾಗೂ ಹೂಗ್ಯ ಗ್ರಾಮಗಳಿಗೆ ಹೆಚ್ಚಿನ ಬಸ್‍ಗಳನ್ನು ಒದಗಿಸುವುದು. ತಾಲೂಕಾಗಿ ಎಂಟು ತಿಂಗಳು ಕಳೆದರೂ ಸರ್ಕಾರಿ ಕಚೇರಿಗಳು ತೆರೆದಿಲ್ಲ. ಕೂಡಲೇ ಈ ಬಗ್ಗೆ ಜಿಲ್ಲಾಡಳಿತ ಕ್ರಮವಹಿಸಬೇಕು ಎಂದು ಕೋರಿದರು.

ಬಂಡಳ್ಳಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಬೇಕು. ಬಂಡಳ್ಳಿ ಮಾರ್ಗದಲ್ಲಿ ಎರಡು ಹಳ್ಳಿಗಳು ಮಳೆ ಬಂದರೆ ಜನರು ಪರದಾಡುವಂತಾಗಿದೆ. ಚೆಸ್ಕಾಂ ಅಧಿಕಾರಿಗಳು ರೈತರ ಮನವಿಗೆ ಸ್ಪಂದಿ ಸುತ್ತಿಲ್ಲ ಎಂದು ಆರೋಪಿಸಿದರು. ಚಿಗತಾಪುರ ಗ್ರಾಮದ ಮಾದೇವ ಮಾತನಾಡಿ, ಕೆರೆಯನ್ನು ಅಕ್ರಮವಾಗಿ ಮಾರಿಮುತ್ತು ಎಂಬುವರು ಒತ್ತುವರಿ ಮಾಡಿಕೊಂಡಿದ್ದು, ಕೂಡಲೇ ಇದನ್ನು ತೆರವುಗೊಳಿಸಿ ಸಾರ್ವ ಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದರು. ಕೊಂಗರಹಳ್ಳಿ ಗ್ರಾಮದ ಕೋದಂಡ ರಾಮ ಮಾತನಾಡಿ, ಗ್ರಾಮದಿಂದ ತಮಿ ಳುನಾಡು ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದುರಸ್ತಿಪಡಿಸಬೇಕು ಎಂದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಾತನಾಡಿ, ಉಡುತೊರೆ ಜಲಾ ಶಯ ಉತ್ತಮ ಮಳೆಯಿಂದಾಗಿ ಭರ್ತಿಯಾಗಿದೆ. ಆದರೆ ಜಮೀನುಗಳಿಗೆ ನೀರು ಸರಾಗವಾಗಿ ಹರಿದುಹೋಗಲು ಸಮ ರ್ಪಕ ವ್ಯವಸ್ಥೆಯಿಲ್ಲದೇ ನೀರೆಲ್ಲಾ ಪೋಲಾಗುತ್ತಿದೆ. ಕೂಡಲೇ ನಾಲೆಗಳನ್ನು ಸರಿಪಡಿಸಿ ನೀರು ಪೂರೈಸಬೇಕು. ಇದಕ್ಕಾಗಿ ಅಜ್ಜೀಪುರ ಗ್ರಾಮದಲ್ಲಿ ನೀರಾವರಿ ಇಲಾಖೆ ತೆರೆದು ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿ ದರು. ಅಲ್ಲದೇ ಅಜ್ಜೀಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದ ಆಸೆಗಾಗಿ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿ ಕೊಟ್ಟಿದ್ದು, ಕೂಡಲೇ ಇದನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ಇಲ್ಲಿ ಸಾರ್ವಜನಿಕರು ಸಲ್ಲಿಸಿರುವ ಸಮ ಸ್ಯೆಗಳ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಬೇಕು. ಸಂಬಂಧಿಸಿದ ಆಯಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದರು.

ಶಾಸಕ ಆರ್.ನರೇಂದ್ರ ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ಏರ್ಪ ಡಿಸಿರುವ ಜನಸಂಪರ್ಕ ಸಭೆಯಲ್ಲಿ ಜನರು ಅರ್ಜಿಗಳನ್ನು ಸಲ್ಲಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಸದಸ್ಯೆ ಮರುಗದಮಣಿ, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಮತಾ, ಹನೂರು ವಿಶೇಷ ತಹಶಿಲ್ದಾರ್ ಶಿವಮ್ಮ, ತಾಲೂಕು ಪಂಚಾಯಿತಿ ಇಓ ಉಮೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೋಹನಕೃಷ್ಣ ಇದ್ದರು.

Translate »