4 ತಿಂಗಳ ವೇತನ ಬಿಡುಗಡೆಗೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ
ಮೈಸೂರು

4 ತಿಂಗಳ ವೇತನ ಬಿಡುಗಡೆಗೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

January 5, 2021

ಮೈಸೂರು,ಜ.4(ಪಿಎಂ)-ಬಿಸಿಯೂಟ ತಯಾರಕರಿಗೆ ಕೂಡಲೇ 4 ತಿಂಗಳ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾ ಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‍ನ (ಎಐಟಿಯುಸಿ ಸಂಯೋಜಿತ) ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಡಿಸಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ಕಳೆದ 18 ವರ್ಷಗಳಿಂದ ಮಧ್ಯಾಹ್ನದ ಉಪಾಹಾರ ಯೋಜನೆಯಡಿಯಲ್ಲಿ ಸರ್ಕಾರದ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿದ್ದೇವೆ. ಸೆಪ್ಟಂಬರ್, ಅಕ್ಟೋ ಬರ್, ನವೆಂಬರ್ ಮತ್ತು ಡಿಸೆಂಬರ್ ಸೇರಿ ದಂತೆ 4 ತಿಂಗಳ ವೇತನವನ್ನು ನಮಗೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ನಾವು ಈ ವೇತನ ನೆಚ್ಚಿಕೊಂಡೇ ಜೀವನ ನಡೆಸುತ್ತಿದ್ದೇವೆ. ಹೀಗಾಗಿ ವೇತನ ಬಿಡುಗಡೆ ಮಾಡಬೇಕು. ಜೊತೆಗೆ ಕನಿಷ್ಠ ಕೂಲಿ ಜಾರಿಗೊಳಿಸ ಬೇಕು. ಬಿಸಿಯೂಟ ತಯಾರಕರ ಕಲ್ಯಾಣ ಮಂಡಳಿ ರಚನೆ ಮಾಡಬೇಕು. ಪಿಎಫ್ ಮತ್ತು ಇಎಸ್‍ಐ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದರು. ಸಂಘಟನೆ ಮುಖಂಡರಾದ ಪದ್ಮಮ್ಮ, ಸಾವಿತ್ರಮ್ಮ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Translate »