ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಪ್ರಸ್ತಾಪವಿಲ್ಲ
ಮೈಸೂರು

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಪ್ರಸ್ತಾಪವಿಲ್ಲ

June 24, 2018

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಲಹೆಗಾರ ರಾಗಿ ಮೈಸೂರು ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇಮಕ ಮಾಡುವ ಪ್ರಸ್ತಾಪವಿಲ್ಲ. ಆದರೆ ಅವರ ಸಲಹೆಯನ್ನು ನಾವು ಪಡೆಯುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಇಂದಿಲ್ಲಿ ತಿಳಿಸಿದ್ದಾರೆ.

ಪ್ರೊ. ರಂಗಪ್ಪ ನೇಮಕಾತಿಗೆ ಕೆಲವರು ವಿರೋಧ ವ್ಯಕ್ತಪಡಿಸಿ ನೀಡಿದ ಮನವಿ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತ ನಾಡಿದ ಸಚಿವರು, ಪ್ರೊ. ರಂಗಪ್ಪಮೇಲೆ ಭ್ರಷ್ಟಚಾರದ ಆರೋಪಗಳಿವೆ. ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಹಗರಣದ ಆರೋಪ ಕುರಿತು ವಿಧಾನ ಮಂಡಲ ಹಕ್ಕು ಬಾಧ್ಯತಾ ಸಮಿತಿ ವರದಿ ನೀಡಿದೆ.

ಪ್ರೊ. ರಂಗಪ್ಪ ಅವರ ಮೇಲಿನ ಆರೋಪದ ಬಗ್ಗೆ ಮತ್ತೆ ಚರ್ಚೆ ಬೇಡ, ಅವರು ತಪ್ಪು ಮಾಡಿದ್ದರೆ ಕಾನೂನಿನಡಿ ಶಿಕ್ಷೆ ಅನುಭವಿಸುತ್ತಾರೆ. ಅಂತಹವರ ವಿರುದ್ಧ ಮತ್ತೆ ಸುದ್ದಿ ಮಾಡುವುದು ಸರಿಯಲ್ಲ ಎಂದರು.

Translate »